2026-07-23 04:26:44

Palla Puja at Sri Krishna Matha | ಶೀರೂರು ಮಠದ ಪೂರ್ವ ಯತಿ ಲಕ್ಷ್ಮೀವರ ತೀರ್ಥರ ಆರಾಧನೆ ಶ್ರೀಕೃಷ್ಣ ಮಠದಲ್ಲಿ ಪಲ್ಲಪೂಜೆ | SNK

Palla Puja at Sri Krishna Matha | ಶೀರೂರು ಮಠದ ಪೂರ್ವ ಯತಿ ಲಕ್ಷ್ಮೀವರ ತೀರ್ಥರ ಆರಾಧನೆ ಶ್ರೀಕೃಷ್ಣ ಮಠದಲ್ಲಿ ಪಲ್ಲಪೂಜೆ | SNK

ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಶೀರೂರು ಮಠದ ಪೂರ್ವ ಯತಿಗಳಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಅಂಗವಾಗಿ ಮಂಗಳವಾರ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಪಲ್ಲಪೂಜೆ ಭಕ್ತಿಭಾವದಿಂದ ನೆರವೇರಿತು.

ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಪಲ್ಲಪೂಜೆಯಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

ಈ ಸಂದರ್ಭದಲ್ಲಿ ಮಠದ ಆಶ್ರಿತರು, ಭಕ್ತರು ಹಾಗೂ ಗಣ್ಯರು ಭಾಗವಹಿಸಿ ಪೂರ್ವ ಯತಿಗಳಿಗೆ ಭಕ್ತಿಪೂರ್ವಕವಾಗಿ ನಮನ ಸಲ್ಲಿಸಿದರು. ಕಾರ್ಯಕ್ರಮವು ಧಾರ್ಮಿಕ ವಾತಾವರಣದಲ್ಲಿ ಭಕ್ತಿಭಾವದಿಂದ ನಡೆಯಿತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.