ಚೆನ್ನೈ: ಎಐಎಡಿಎಂಕೆ ಪಕ್ಷದಿಂದ ಉಚ್ಚಾಟನೆಗೊಂಡಿರುವ ಓ. ಪನ್ನೀರಸೆಲ್ವಂ ಡಿಎಂಕೆ ಸೇರಲಿದ್ದಾರೆಯೇ? ಹೀಗೊಂದು ಸುದ್ದಿ ಹರಿದಾಡುತ್ತಿದೆ. ಸುದ್ದಿಗೆ ಪುಷ್ಠಿ ನೀಡುವಂತೆ ಪನ್ನೀರಸೆಲ್ವಂ ಇಂದು ಸಚಿವಾಲಯದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ನಂತರ ಮಾತನಾಡಿದ ಅವರು ಡಿಎಂಕೆ ಪಕ್ಷವೇ 2026 ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಂ.ಕೆ. ಸ್ಟಾಲಿನ್ ಅವರು ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಿದ್ದು, ಅವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಿದ್ದೇನೆ ಎಂದರು.
ಎಐಎಡಿಎಂಕೆ ಪಕ್ಷದ ಇನ್ನೂ ಕೆಲವು ಶಾಸಕರು ಸಿಎಂ ಸ್ಟಾಲಿನ್ ಅವರನ್ನು ಬೆಂಬಲಿಸಿದ್ದಾರೆ. ಸತತ ಎರಡನೇ ಭಾರಿಗೆ ಡಿಎಂಕೆ ಸರ್ಕಾರ ರಚಿಸುವುದು ಖಚಿತ. ಜನರೂ ಅದನ್ನೇ ಹೇಳುತ್ತಿದ್ದಾರೆ. ಏಕೆಂದರೆ ಸ್ಟಾಲಿನ್ ಅವರ ಕೆಲಸಗಳು ಆ ರೀತಿ ಇವೆ ಎಂದರು.