2026-03-07 05:48:04

Parents left a five day old baby | ಐದು ದಿನದ ತೊಟ್ಟಿಲ ಮಗುವನ್ನು ದೇಗುಲದ ಬಳಿ ಇಟ್ಟು ಹೋದ ಪೋಷಕರು | Speed News Kannada

Parents left a five day old baby | ಐದು ದಿನದ ತೊಟ್ಟಿಲ ಮಗುವನ್ನು ದೇಗುಲದ ಬಳಿ ಇಟ್ಟು ಹೋದ ಪೋಷಕರು | Speed News Kannada

ತುಮಕೂರು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಡೆಯೂರು ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಬಳಿ ನವಜಾತ ಶಿಶು ಪತ್ತೆಯಾಗಿದೆ. ಕೇವಲ 5 ದಿನಗಳ ಹಸುಗೂಸು ಗಂಡು ಮಗುವನ್ನು ರಾತ್ರಿ ಸಮಯದಲ್ಲಿ ಬ್ಯಾಗ್‌ನೊಳಗೆ ಇಟ್ಟು ಬೀದಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.
ಸಿದ್ದಲಿಂಗೇಶ್ವರ ದೇಗುಲದ ಸಮೀಪ ರಸ್ತೆ ಪಕ್ಕದಲ್ಲಿ ಬ್ಯಾಗ್ ಪತ್ತೆಯಾಗಿದೆ. ಸಾರ್ವಜನಿಕರು ಸ್ಥಳಕ್ಕೆ ಹೋಗಿ ಬ್ಯಾಕ್ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ನವಜಾತ ಗಂಡು ಶಿಶು ಇರುವುದು ಪತ್ತೆಯಾಗಿದ್ದು, ತಕ್ಷಣ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ರಾತ್ರಿ ಸಮಯದಲ್ಲಿ ಮಗು ಅಳುವ ಶಬ್ದ ಕೇಳಿ ಬಂದ ಸ್ಥಳೀಯ ವ್ಯಕ್ತಿಯೊಬ್ಬರು ನೋಡಲು ಹೋದಾಗ ಬ್ಯಾಗ್‌ನೊಳಗೆ ಅಳುತ್ತಿರುವ ನವಜಾತ ಶಿಶುವನ್ನು ಕಂಡರು. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಗುವನ್ನು ರಕ್ಷಿಸಿದರು. ಮಗುವನ್ನು ಆರೋಗ್ಯಕರ ಸ್ಥಿತಿಯಲ್ಲಿದ್ದಂತೆ ಜಿಲ್ಲಾ ಆಸ್ಪತ್ರೆಯ ಸಖಿ ಕೇಂದ್ರಕ್ಕೆ ಕರೆದೊಯ್ದರು. ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಗುವಿನ ತಾಯಿ ಮತ್ತು ಪೋಷಕರನ್ನು ಪತ್ತೆಹಚ್ಚುವ ಕಾರ್ಯಾಚರಣೆ ನಡೆಯುತ್ತಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಸೂಕ್ತ ಆರೈಕೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.