2026-05-04 09:20:52

peenya flyover bundh from tomorrow for 4 days; ನಾಳೆಯಿಂದ ಪೀಣ್ಯ ಮೇಲ್ಸೇತುವೆ 4 ದಿನ ಬಂದ್: ಪರ್ಯಾಯ ಮಾರ್ಗ ಬಳಸಿ Speed News Kannada

peenya flyover bundh from tomorrow for 4 days; ನಾಳೆಯಿಂದ ಪೀಣ್ಯ ಮೇಲ್ಸೇತುವೆ  4 ದಿನ ಬಂದ್: ಪರ್ಯಾಯ ಮಾರ್ಗ ಬಳಸಿ Speed News Kannada

ಬೆಂಗಳೂರು: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈ ಓವರ್ ನಾಲ್ಕು ದಿನಗಳ ಅವಧಿಗೆ ಬಂದ್‌ ಆಗಲಿದೆ. ಮೇ 5ರ ಬೆಳಗ್ಗೆ 5 ಗಂಟೆಯಿಂದ ಮೇ 8ರ ಬೆಳಗ್ಗೆ 11 ರವರೆಗೆ ಮುಚ್ಚಲಾಗುತ್ತದೆ.

ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಬಂದ್‌ ಮಾಡಲಾಗಿದೆ.

ಈ ಅವಧಿಯಲ್ಲಿ ಮೇಲ್ಸೇತುವೆ ಎರಡೂ ಬದಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.  ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗಿದೆ.

ಕಾಮಗಾರಿ ಕೆಲಸದ ಹಿನ್ನೆಲೆಯಲ್ಲಿ  ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ ಎಂದು ನಗರ ಸಂಚಾರ ಪೊಲೀಸರು ಹೇಳಿದ್ದಾರೆ.

 ಪರ್ಯಾಯ ಮಾರ್ಗವಾಗಿ ನೆಲಮಂಗಲದಿಂದ ಬೆಂಗಳೂರಿಗೆ ಬರುವ ವಾಹನಗಳು ಫ್ಲೈಓವರ್ ಕೆಳಭಾಗದ ಸರ್ವೀಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದು.

ಬೆಂಗಳೂರು ನಗರದಿಂದ ನೆಲಮಂಗಲ ಕಡೆಗೆ ಹೋಗುವ ವಾಹನಗಳು ಸರ್ವೀಸ್ ರಸ್ತೆಯಲ್ಲಿ ಎಸ್ಆರ್ ಎಸ್ ಜಂಕ್ಷನ್, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ ಮೂಲಕ ಸಂಚರಿಸಬಹುದಾಗಿದೆ.

 ಈ ಹಿಂದೆಯೂ ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಲೋಡ್ ಟೆಸ್ಟಿಂಗ್ ಗಾಗಿ

 ಫ್ಲೈ ಓವರ್ ಏಪ್ರಿಲ್ 13ರಿಂದ 5 ದಿನ ಬಂದ್ ಆಗಲಿದೆ ಎಂದು ತಿಳಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಪ್ರಕ್ರಿಯೆಯನ್ನು  ಮುಂದೂಡಲಾಗಿತ್ತು.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.