2026-07-23 08:28:00

Peenya flyover closure cancelled Vehicular traffic halted|ಪೀಣ್ಯ ಫ್ಲೈಓವರ್ ಬಂದ್ ರದ್ದು. ವಾಹನ ಸಂಚಾರ ಸ್ಥಗಿತ|Speed News Kannada

Peenya flyover closure cancelled Vehicular traffic halted|ಪೀಣ್ಯ ಫ್ಲೈಓವರ್ ಬಂದ್ ರದ್ದು. ವಾಹನ ಸಂಚಾರ ಸ್ಥಗಿತ|Speed News Kannada

ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಏಪ್ರಿಲ್ 13ರಿಂದ 5 ದಿನಗಳ ಕಾಲ ಬಂದ್ ಮಾಡುವ ನಿರ್ಧಾರವನ್ನು ಹಿಂಪಡೆಯಲಾಗಿದೆ. ನಾಳೆಯಿಂದ ಫ್ಲೈಓವರ್ ಮೇಲೆ ವಾಹನ ಸಂಚಾರ ಎಂದಿನಂತೆ ಮುಂದುವರೆಯಲಿದೆ ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ವೇತುವೆಯ ಕೇಬಲ್‌ಗಳ ದುರಸ್ತಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಂತಿಮ ಲೋಡ್ ಟೆಸ್ಟಿಂಗ್ ನಡೆಸಲು ಯೋಜಿಸಿತ್ತು. ಈ ಕಾರಣಕ್ಕೆ ಏಪ್ರಿಲ್ 13ರ ಬೆಳಿಗ್ಗೆ 5 ಗಂಟೆಯಿಂದ ಏಪ್ರಿಲ್ 17ರ ಬೆಳಿಗ್ಗೆ 11 ಗಂಟೆಯವರೆಗೆ ವಾಹನ ಸಂಚಾರ ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ ಎಂದು ಮೊದಲು ಘೋಷಿಸಲಾಗಿತ್ತು.

ಆದರೆ ಕಾರಣಾಂತರಗಳಿಂದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಹೀಗಾಗಿ ಫ್ಲೈಓವರ್ ಬಂದ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ಇದೇ ವೇಳೆ, ಏಪ್ರಿಲ್ 15ರಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಭೇಟಿ ಮಾಡುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಸ್ತೆ ಮಾರ್ಗದಲ್ಲಿ ಅವರ ಪ್ರಯಾಣ ಸಾಧ್ಯತೆ ಇರುವುದರಿಂದ ಟ್ರಾಫಿಕ್ ದಟ್ಟಣೆ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ.ಹೀಗಾಗಿ ಪೀಣ್ಯ, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ ಮತ್ತು 8ನೇ ಮೈಲಿ ಭಾಗಗಳಲ್ಲಿ ಸಂಚಾರ ಎಂದಿನಂತೆ ಮುಂದುವರೆಯಲಿದೆ

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.