ರಾಜ್ಯಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇನ್ನೂ ರಾಜ್ಯದ ಕೆಲವು ಭಾಗಗಳಲ್ಲಿ ಸಧಾರಣ ಮಳೆಯಾಗುತ್ತಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮಾಹಿತಿ ತಿಲಿಸಿದೆ. ಬೆಂಗಳೂರಿನಲ್ಲಿ ಬಿಸಿಲಿನ ಗರಿಷ್ಟ ತಾಪಮಾನ 36 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಟಿದೆ. ಬೇಸಿಗೆಯ ಬಿಸಿಲಿನ ತೀವ್ರತೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಇನ್ನು ಜನರ ಜೀವನಾಡಿಯಾದ ಕಾವೇರಿ ಮತ್ತು ಕಬಿನಿ ಜಲಾಶಗಳ ನೀರಿನ ಪ್ರಮಾಣ ಕುಂಟಿತವಾಗುತ್ತಿದ್ದು, ಜಲಾಶಗಳ ನೀರನ್ನೆ ನಂಬಿಕೊಂಡಿದ್ದವರು ಇದೀಗ ಕಷ್ಟದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ವಾಡಿಕೆಗಿಂತ ಹೆಚ್ಛಾಗಿ ಬಿಸಿಲು ಕಾಣಿಸಿಕೊಳ್ಳುತ್ತಿದ್ದು, ಹಲವು ಕಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೇಸಿಗೆಯ ಬಿಸಿಲಿಗೆ ಉತ್ತರ ಕರ್ನಾಟಕ ಜನತೆ ಕಂಗಲಾಗಿದ್ದಾರೆ. ಕಲಬುರಗಿ ಔರಾದ್ ಹೋಬಳಿಯಲ್ಲಿ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ಹೊಂದಿರುವ ಜಿಲ್ಲೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ. ತೀವ್ರ ಬಿಸಿಲಿನ ತಾಪಮಾನದಿಂದಾಗಿ ಕಲಬುರಗಿ ಜಿಲ್ಲಾಡಳಿತವು ಆರೆಂಜ್ ಹೀಟ್ ವೇವ್ ಅಲರ್ಟ್ ಘೋಷಣೆ ಮಾಡಿದೆ.