2026-06-08 04:56:12

petro diesel price hike; what rbi governor says?| ಪೆಟ್ರೋಲ್‌ ಡೀಸೆಲ್‌ ಬೆಲೆ ಹೆಚ್ಚಳ ಸಂಭವ; ಆರ್‌ ಬಿಐ ಗವರ್ನರ್‌ ಏನು ಹೇಳ್ತಾರೆ? | Speed News Kannada

petro diesel price hike; what rbi governor says?| ಪೆಟ್ರೋಲ್‌ ಡೀಸೆಲ್‌ ಬೆಲೆ ಹೆಚ್ಚಳ ಸಂಭವ; ಆರ್‌ ಬಿಐ ಗವರ್ನರ್‌ ಏನು ಹೇಳ್ತಾರೆ? | Speed News Kannada

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟು ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಬೇಕಾದ ಪರಿಸ್ಥಿತಿ ಉಂಟಾಗಬಹುದು ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ. ಈ ಮೂಲಕ ಅವರು ಇಂಧನ ಬೆಲೆ ಏರಿಕೆಯ ಮುನ್ಸೂಚನೆ ನೀಡಿದ್ದಾರೆ.

ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಧ್ಯಪ್ರಾಚ್ಯ ಸಂಘರ್ಷದಿಂದ ಹಾರ್ಮುಜ್ ಜಲಸಂಧಿಯಲ್ಲಿ ಬಿಕ್ಕಟ್ಟು ಉಂಟಾಗಿದೆ. ಇದರಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಪರಿಣಾಮ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಏರಿಕೆಯಾಗುತ್ತಲೇ ಇವೆ. ಭಾರತವು ಇಂಧನ, ಅನಿಲ ಮತ್ತು ರಸಗೊಬ್ಬರಗಳ ಆಮದಿನ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಇದರ ಪರಿಣಾಮ ಭಾರತದ ಮೇಲೂ ಕಾಣಿಸಿಕೊಳ್ಳಲು ಆರಂಭವಾಗಿದೆ ಎಂದು ಹೇಳಿದರು.

ಈ ಬಿಕ್ಕಟ್ಟು ಹೀಗೆಯೇ ಮುಂದುವರೆದರೆ ಸರ್ಕಾರ ಇಂಧನ ಬೆಲೆ ಏರಿಕೆಯ ಭಾರವನ್ನು ಸಾರ್ವಜನಿಕರ ಮೇಲೆ ವರ್ಗಾಯಿಸಬೇಕಾದ ಪರಿಸ್ಥಿತಿ ಬಂದರೂ ಬರಬಹುದು ಎಂದು ಹೇಳಿದರು.

ವಿದೇಶಿ ವಿನಿಮಯ ಉಳಿಸಲು ಇಂಧನ ಬಳಕೆ ಮತ್ತು ಖಾದ್ಯ ತೈಲ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.