2026-05-28 12:28:53

ಮತ್ತೆ ಪೆಟ್ರೋಲ್, ಡೀಸೆಲ್, ಸಿಎನ್‌ ಜಿ ದರ ಹೆಚ್ಚಳ| Speed News Kannada

ಮತ್ತೆ ಪೆಟ್ರೋಲ್, ಡೀಸೆಲ್, ಸಿಎನ್‌ ಜಿ ದರ ಹೆಚ್ಚಳ| Speed News Kannada

ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಮತ್ತೆ ಶಾಕ್ ನೀಡಲಾಗಿದೆ. ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಲಾಗಿದೆ.

ಇಂದು ಪ್ರತಿ ಲೀಟರ್‌ ಗೆ ಪೆಟ್ರೋಲ್ ಬೆಲೆ 87 ಪೈಸೆ ಮತ್ತು ಡೀಸೆಲ್ಬೆಲೆ  91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ.

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆ ಮೇ 15 ರಿಂದ ಈಚೆಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮೂರು ಬಾರಿ ದರವನ್ನು ಹೆಚ್ಚಿಸಿವೆ.

ಮೇ 15 ರಂದು ಲೀಟರ್‌ಗೆ 3 ರೂ. ಮೇ 19 ರಂದು 90 ಪೈಸೆ ಹೆಚ್ಚಳ ಮಾಡಲಾಗಿತ್ತು. ಹೀಗೆ ಕಳೆದ ಹತ್ತು ದಿನಗಳಲ್ಲಿ ಸುಮಾರು 5 ರೂ.ಗಳಷ್ಟು ಹೆಚ್ಚಾಗಿದೆ.

ಸಿಎನ್‌ ಜಿ ದರವನ್ನೂ ಪ್ರತಿ ಕೆಜಿಗೆ ರೂ.1 ಹೆಚ್ಚಿಸಲಾಗಿದೆ. ಕಳೆದ ವಾರ 3 ರೂ. ಏರಿಕೆ ಮಾಡಲಾಗಿತ್ತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.