2026-06-08 01:26:07

Piggy washing dishes in the temple|ದೇವಸ್ಥಾನದಲ್ಲಿ ಪಾತ್ರೆ ತೊಳೆದ ಪಿಗ್ಗಿ |Speed News Kannada

Piggy washing dishes in the temple|ದೇವಸ್ಥಾನದಲ್ಲಿ ಪಾತ್ರೆ ತೊಳೆದ ಪಿಗ್ಗಿ |Speed News Kannada

ಹಾಲಿವುಡ್‌ನಲ್ಲಿ ನಟಿ ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದರೂ ತಮ್ಮ ಮೂಲಗಳನ್ನು ಮರೆಯದ ನಟಿ ಪ್ರಿಯಾಂಕಾ ಚೋಪ್ರಾ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಪ್ರಸ್ತುತ ಅಮೃತಸರ ನಲ್ಲಿ ಇರುವ ಅವರು, ಗೋಲ್ಡನ್ ಟೆಂಪಲ್ ನಲ್ಲಿ ಸೇವೆ ಸಲ್ಲಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ವೀಡಿಯೊದಲ್ಲಿ ಪ್ರಿಯಾಂಕಾ ದೇವಸ್ಥಾನದ ಅಡುಗೆಮನೆಯಲ್ಲಿ ಪಾತ್ರೆಗಳನ್ನು ತೊಳೆಯುತ್ತಿರುವುದು ಕಂಡುಬಂದಿದ್ದು, ಅವರ ಸರಳತೆ ಮತ್ತು ಭಕ್ತಿ ಭಾವಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅವರು ಸಿನಿಮಾ ಶೂಟಿಂಗ್‌ಗಾಗಿ ಬಂದಿದೆಯೇ ಅಥವಾ ವೈಯಕ್ತಿಕ ಭೇಟಿ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದರ ಮಧ್ಯೆ, ಪ್ರಿಯಾಂಕಾ ಚೋಪ್ರಾ ಮತ್ತೆ ಭಾರತೀಯ ಸಿನಿಮಾಗಳಿಗೆ ಮರಳಲು ಸಿದ್ಧರಾಗಿದ್ದಾರೆ. ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಭಾರೀ ಬಜೆಟ್ ಚಿತ್ರದ ಮೂಲಕ ಅವರು ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ಮತ್ತು ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.ಸುಮಾರು 150 ಮಿಲಿಯನ್ ಡಾಲರ್ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ, RRRಗಿಂತಲೂ ದೊಡ್ಡದಾಗಿದೆ ಎಂದು ಹೇಳಲಾಗುತ್ತಿದೆ. 2027ರ ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಈ ಸಿನಿಮಾದ ಮೇಲೆ ಭಾರೀ ನಿರೀಕ್ಷೆಗಳು ವ್ಯಕ್ತವಾಗಿವೆ.

ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾದಾಗ ಪ್ರಿಯಾಂಕಾ ಸೀರೆಯಲ್ಲಿ ಗನ್ ಹಿಡಿದ ಆಕ್ಷನ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಒಟ್ಟಿನಲ್ಲಿ, ಗೋಲ್ಡನ್ ಟೆಂಪಲ್‌ನಲ್ಲಿ ಸೇವೆ ಸಲ್ಲಿಸಿದ ಮೂಲಕ “ದೇಸಿ ಗರ್ಲ್” ಎಂಬ ತನ್ನ ಗುರುತನ್ನು ಮತ್ತೆ ಸಾಬೀತುಪಡಿಸಿರುವ ಪ್ರಿಯಾಂಕಾ, ಈಗ ಭಾರತೀಯ ಸಿನೆಮಾದಲ್ಲಿ ಭರ್ಜರಿ ಕಮ್‌ಬ್ಯಾಕ್‌ಗೆ ಸಿದ್ಧರಾಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.