ಅಂಡಮಾನ್ ಅಂಡಮಾನ್ ಜಿಲ್ಲೆಯ ರಂಗತ್ ನಿಂದ ಹಾರಾಟ ನಡೆಸಿದ್ದ ವಿಮಾನವೊಂದು ಸಮುದ್ರದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಮುದ್ರದಲ್ಲಿ ವಿಮಾನ ಪತನಗೊಂಡಿದ್ದು, ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 7 ಜನರನ್ನು ರಕ್ಷಿಸಲಾಗಿದೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ ನಿಗದಿತ ಸಮಯದಲ್ಲಿ ಮಾಯಾಬಂದರ್ ನಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಸಮುದ್ರ ಭಾಗದಲ್ಲಿ ಪತನಗೊಂಡಿದೆ. ವಿಮಾನದಲ್ಲಿ ಇಬ್ಬರು ಸಿಬ್ಬಂದಿಗಳು ಹಾಗೂ ಐವರು ಪ್ರಯಾಣಿಕರು ಇದ್ದರು. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ. ಪೋರ್ಟ್ ಬ್ಲರ್ ನಿಂದ ಪರ್ಯಾಯ ವಿಮಾನವನ್ನು ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.