2026-03-07 02:13:11

PM Modi Congratulates Prime Minister Sane Takkechi | ಜಪಾನ್ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ಸನೇ ತಕ್ಕೆಚಿಗೆ ಭರ್ಜರಿ ಗೆಲುವು ಪ್ರಧಾನಿ ಮೋದಿ ಅಭಿನಂದನೆ | Speed News Kannada

PM Modi Congratulates Prime Minister Sane Takkechi  | ಜಪಾನ್ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ಸನೇ ತಕ್ಕೆಚಿಗೆ ಭರ್ಜರಿ ಗೆಲುವು ಪ್ರಧಾನಿ ಮೋದಿ ಅಭಿನಂದನೆ | Speed News Kannada

ಟೋಕಿಯೋ, ಫೆಬ್ರವರಿ 09: ಜಪಾನ್ನಲ್ಲಿ ಭಾನುವಾರ ನಡೆದ ಸಂಸತ್ ಚುನಾವಣೆ ಯಲ್ಲಿ ಪ್ರಧಾನಿ ಸನೇ ತಕೈಚಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ಬಹುಮತ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಭಾಚುನಾವಣೆಯಲ್ಲಿ ಜಪಾನ್ ಪ್ರಧಾನಿ ಸನೇ ತಕ್ಕೆಚಿ ನೇತೃತ್ವದ ಒಕ್ಕೂಟವು ಭರ್ಜರಿ ಜಯ ಸಾಧಿಸಿದೆ. 465 ಸ್ಥಾನಗಳ ಕೆಳಮನೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 233 ಸ್ಥಾನಗಳನ್ನು ತಕ್ಕೆಚಿಯ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮಾತ್ರ ಪಡೆದುಕೊಂಡಿದೆ. ಸಾರ್ವತ್ರಿಕ ಚುನಾವಣೆಗೆ ಮತದಾನದ ನಂತರ ಸಂಜೆ ಜಪಾನ್‌ನಲ್ಲಿ ಮತ ಎಣಿಕೆ ಪ್ರಾರಂಭವಾಯಿತು. ಎಣಿಕೆಯ ಮೊದಲ ಗಂಟೆಯೊಳಗೆ, ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್‌ ಪಕ್ಷ (ಎಲ್‌ಡಿಪಿ) ನೇತೃತ್ವದ ಒಕ್ಕೂಟವು ಗೆಲ್ಲಲಿದೆ ಎಂಬುದು ಸ್ಪಷ್ಟವಾಗಿತ್ತು. ಎಣಿಕೆಯ ಎರಡು ಗಂಟೆಗಳ ಅಂತ್ಯದ ವೇಳೆಗೆ, ಎಲ್‌ಡಿಪಿ ಬಹುಮತದ ಗಡಿಯನ್ನು ದಾಟಿತ್ತು. ಸಂಸತ್ತಿನ ಕೆಳಮನೆಯ 465 ಸ್ಥಾನಗಳಿಗೆ 1,200 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು.ಜನವರಿ 23 ರಂದು ಪ್ರಧಾನಿ ಸನೇ ತಕೈಚಿ ಜಪಾನ್ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಿ ಚುನಾವಣೆಗೆ ಕರೆ ನೀಡಿದರು. ಈ ನಿರ್ಧಾರವು 1990 ರ ನಂತರ ಫೆಬ್ರವರಿಯಲ್ಲಿ ಜಪಾನ್‌ನಲ್ಲಿ ಮೊದಲ ಕೆಳಮನೆ ಚುನಾವಣೆಗೆ ಕಾರಣವಾಯಿತು.
ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು.ನಿಮ್ಮ ಸಮರ್ಥ ನಾಯಕತ್ವದಲ್ಲಿ ನಾವು ಭಾರತ-ಜಪಾನ್ ಸ್ನೇಹವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಹೇಳಿದರು.ತಕ್ಕೆಚಿ ಅವರ ಲಿಬರಲ್ ಡೆಮಾಕ್ರಟಿಕ್ ಪಕ್ಷದ ನೇತೃತ್ವದ ಮೈತ್ರಿಕೂಟವು ಮೂರನೇ ಎರಡರಷ್ಟು ಕ್ಷೇತ್ರಗಳಲ್ಲಿ ವಿಜಯ ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿತ್ತು.ಜಪಾನ್‌ನ ಕೆಳಮನೆಯು 465 ಸಂಖ್ಯಾಬಲವನ್ನು ಹೊಂದಿದೆ. ತಕೈಚಿ ನೇತೃತ್ವದ ಪಕ್ಷವು ಹಾಲಿ ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಸಮೀಕ್ಷೆ ತಿಳಿಸಿತ್ತು. ಚೀನಾದೊಂದಿಗಿನ ಬಿಕ್ಕಟ್ಟು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸೇನಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಜಪಾನ್ ಆರ್ಥಿಕತೆಗೆ ಉತ್ತೇಜನ ನೀಡುವ ಗುರಿಯನ್ನು ಹೊಂದಿರುವ ಬಲಪಂಥೀಯ ಕಾರ್ಯಸೂಚಿಯನ್ನು ಜಾರಿಗೊಳಿಸಲು ಈ ಫಲಿತಾಂಶವು ಅವಕಾಶ ಕಲ್ಪಿಸಲಿದೆ ಎನ್ನಲಾಗಿತ್ತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.