2026-06-08 06:39:44

ಇಟಲಿ ಪ್ರಧಾನಿ ಮೆಲೋನಿಗೆ ಮೋದಿ ಕೊಟ್ಟ ಚಾಕೊಲೇಟ್‌ ಯಾವುದು? ವೈರಲ್‌ ಆದ ವಿಡಿಯೋ|Speed News Kannada

ಇಟಲಿ ಪ್ರಧಾನಿ ಮೆಲೋನಿಗೆ ಮೋದಿ ಕೊಟ್ಟ ಚಾಕೊಲೇಟ್‌ ಯಾವುದು? ವೈರಲ್‌ ಆದ ವಿಡಿಯೋ|Speed News Kannada

ರೋಮ್: ರೋಮ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಭಾರತದ ಪ್ರಸಿದ್ಧ ‘ಮೆಲೋಡಿ’ ಚಾಕೊಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು ವೀಕ್ಷಕರ ಸಂಖ್ಯೆ ಹೆಚ್ಚುತ್ತಲೇ ಇದೆ.

ಮೋದಿ ಹಾಗೂ ಮೆಲೋನಿ ಉತ್ತಮ ಸ್ನೇಹಿತರು. ಇವರ ಸ್ನೇಹವನ್ನು ಸಾಮಾಜಿಕ ಜಾಲತಾಣದಲ್ಲಿ (Meloni+Modi) ‘ಮೆಲೋಡಿ’ ಎಂದೇ ಕರೆಯಲಾಗುತ್ತಿತ್ತು. ಇದೀಗ ಮೋದಿ ‘ಮೆಲೋಡಿ’ ಚಾಕೊಲೇಟ್ ಅನ್ನೇ ಉಡುಗೊರೆಯಾಗಿ ನೀಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದಾರೆ. 

ಈ ವೀಡಿಯೋವನ್ನು ಮೆಲೋನಿ ತಮ್ಮ ಇನ್‌ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಉಡುಗೊರೆ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಮೋದಿಯವರಿಗೆ ಜಾರ್ಜಿಯಾ ಮೆಲೋನಿ ಭವ್ಯ ಸ್ವಾಗತ ಕೋರಿದ್ದಾರೆ. “Welcome to Rome, My Friend” ಎಂದು ಹೇಳಿದ್ದು, ಮೋದಿ ಜೊತೆಗಿನ ಭಾವಚಿತ್ರಗಳನ್ನು ಹಂಚಿಕೊಂಡಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.