2026-03-07 05:18:16

PM Modi to be conferred with Israels highest civilian honour | ಪ್ರಧಾನಿ ಮೋದಿಗೆ ಇಸ್ರೇಲ್‌ನ ಅತ್ಯುನ್ನತ ನಾಗರಿಕ ಗೌರವ ಸ್ಪೀಕರ್ ಆಫ್ ದಿ ನೆಸೆಟ್‌ʼ ಪ್ರಧಾನ | Speed News Kannada

PM Modi to be conferred with Israels highest civilian honour | ಪ್ರಧಾನಿ ಮೋದಿಗೆ ಇಸ್ರೇಲ್‌ನ ಅತ್ಯುನ್ನತ ನಾಗರಿಕ ಗೌರವ ಸ್ಪೀಕರ್ ಆಫ್ ದಿ ನೆಸೆಟ್‌ʼ ಪ್ರಧಾನ | Speed News Kannada

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್‌ ನ ‘ಸ್ಪೀಕರ್ ಆಫ್ ದಿ ನೆಸೆಟ್‌ʼ (‘Speaker of the Knesset Medal’) ಪುರಸ್ಕಾರ ನೀಡಿ ಗೌರವಿಸಲಾಗಿದೆ.
ಭಾರತ -ಇಸ್ರೇಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಪ್ರಧಾನಿ ಮೋದಿ ಅವರಿಗೆ ‘ಸ್ಪೀಕರ್ ಆಫ್ ದಿ ಕನೆಸೆಟ್‌’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
ಪ್ರಸ್ತುತ, ಪ್ರಧಾನಿ ಮೋದಿ ಅವರು ಎರಡು ದಿನಗಳ ಇಸ್ರೇಲ್ ಪ್ರವಾಸ ಕೈಗೊಂಡಿದ್ದಾರೆ. ಒಂಬತ್ತು ವರ್ಷಗಳಲ್ಲಿ ಎರಡನೇ ಬಾರಿಗೆ ಇಸ್ರೇಲ್‌ಗೆ ಭೇಟಿ ನೀಡಿದ ಮೋದಿ ಅವರನ್ನು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಪತ್ನಿ ಸಾರಾ ಅವರು ಬೆನ್‌ ಗುರಿಯನ್‌ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಉಭಯ ದೇಶಗಳ ನಡುವಿನ ರಕ್ಷಣೆ ಹಾಗೂ ಭದ್ರತಾ ಸಹಕಾರವನ್ನು ಹೆಚ್ಚಿಸುವ ಸಂಬಂಧ ಎರಡೂ ದೇಶದ ಪ್ರಧಾನಿಗಳ ನಿಯೋಗ ಮಟ್ಟದಲ್ಲಿ ಇಂದು ಮಹತ್ವದ ಮಾತುಕತೆ ನಡೆಯಲಿದೆ. ವಿಜ್ಞಾನ–ತಂತ್ರಜ್ಞಾನ, ನಾವೀನ್ಯ, ವ್ಯಾಪಾರ– ಹೂಡಿಕೆ, ಕೃಷಿ–ನೀರಾವರಿ ಕ್ಷೇತ್ರದಲ್ಲಿ ಭಾರತ–ಇಸ್ರೇಲ್‌ ನಡುವಿನ ಪರಸ್ಪರ ಸಹಕಾರ ಕುರಿತೂ ಚರ್ಚೆ ನಡೆಯಲಿದೆ. 
ಮೋದಿ ಅವರನ್ನು ಅಭಿನಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಗೌರವ ಪರಸ್ಪರ ಸಬಲೀಕರಣಕ್ಕಾಗಿ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.