2026-06-25 02:00:32

pocso case against vachananda swamiji; got anticipatory bail| ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು; ನಿರೀಕ್ಷಣಾ ಜಾಮೀನು ಪಡೆದ ಶ್ರೀಗಳು| Speed News Kannada

pocso case against vachananda swamiji; got anticipatory bail| ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು; ನಿರೀಕ್ಷಣಾ ಜಾಮೀನು ಪಡೆದ ಶ್ರೀಗಳು| Speed News Kannada

ಹರಿಹರ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದಡಿಯಲ್ಲಿ ಪದಚ್ಯುತ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಲಕ್ಷೇಶ್ವರ ಠಾಣೆಯಲ್ಲಿ ದಾಖಲಾಗಿದ್ದ '0' ಎಫ್‌ಐಆರ್ ಅನ್ನು ಕೃತ್ಯ ನಡೆದ ಸ್ಥಳದ ವ್ಯಾಪ್ತಿಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ. ಆದರೆ ಈಗಾಗಲೇ ವಚನಾನಂದ ಶ್ರೀಗಳು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದು ಬಂಧನ ಸಾಧ್ಯತೆ  ಕಡಿಮೆ ಎನ್ನಲಾಗುತ್ತಿದೆ.

ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ತಮ್ಮ ಪುತ್ರನಿಂದ ವಚನಾನಂದ ಸ್ವಾಮೀಜಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿ ಬಾಲಕನ ತಾಯಿ ತಾಯಿ ಲಕ್ಷ್ಮೀಶ್ವರ ತಾಲ್ಲೂಕಿನಲ್ಲಿ ದೂರು ನೀಡಿದ್ದರು.

ತನಿಖೆ ಆರಂಭಿಸಿರುವ  ಪೊಲೀಸರು ದೂರುದಾರ ತಾಯಿಯ ಹೇಳಿಕೆ ಪಡೆದಿದ್ದು, ಸಂತ್ರಸ್ತ ಬಾಲಕನ ಹೇಳಿಕೆ ಪಡೆಯಲು ನಿರ್ಧರಿಸಿದ್ದಾರೆ.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ ಟ್ರಸ್ಟ್ ಸ್ವಾಮೀಜಿ ಅವರನ್ನು ಇತ್ತೀಚೆಗಷ್ಟೇ ಪೀಠದಿಂದ ಪದಚ್ಯುತಗೊಳಿಸಿತ್ತು. ಮಠದಲ್ಲಿದ್ದ ಮಕ್ಕಳಿಂದ ಸ್ವಾಮೀಜಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಸೇರಿದಂತೆ ಹಲವರ ಹೇಳಿಕೆ ದಾಖಲಿಸಿಕೊಂಡಿತ್ತು.

ವಚನಾನಂದ ಸ್ವಾಮೀಜಿ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ- 482ರ ಅಡಿ ನಿರೀಕ್ಷಣಾ ಜಾಮೀನು ಕೋರಿ ಏ.21ರಂದು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.