2026-06-25 02:19:31

Police constable dies after being hit by vehicle | ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು | Speed news kannada

Police constable dies after being hit by vehicle | ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು | Speed news kannada

ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್‌ ಕಾನ್‌ಸ್ಟೆಬಲ್‌ ಸಾವನ್ನಪ್ಪಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದ ಬಳಿ ನಡೆದಿದೆ. ಧರೆಪ್ಪ ಅಂಜುಟಗಿ (26) ಮೃತ KSRP ಪೇದೆ. ಧರೆಪ್ಪ ಕಲಬುರಗಿಯಿಂದ ಶಿರವಾಳ್ ಗ್ರಾಮಕ್ಕೆ ಹೊರಟಿದ್ದರು. ಗೊಬ್ಬರ (ಬಿ) ಗ್ರಾಮದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪೊಲೀಸ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ತಮ್ಮರಾಯ ಪಾಟೀಲ್, ಸಿಪಿಐ ಲಖನ್ ಮಸಗಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಲ ಗಾಣಗಾಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.