2026-03-07 05:14:59

Police go after foreigners residing illegally | ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬೆನ್ನಹಿಂದೆ ಬಿದ್ದ ಪೊಲೀಸರು ದಾಖಲೆಗಳ ಪರಿಶೀಲನೆ | Speed News Kannada

Police go after foreigners residing illegally | ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬೆನ್ನಹಿಂದೆ ಬಿದ್ದ ಪೊಲೀಸರು ದಾಖಲೆಗಳ ಪರಿಶೀಲನೆ | Speed News Kannada

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು ಬುಧವಾರ ಒಂದೇ ದಿನ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದೇಶಿಗರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಪೂರ್ವ ವಿಭಾಗದ 14 ಪೊಲೀಸ್‌‍ ತಂಡಗಳು ರಾಮಮೂರ್ತಿನಗರ, ಕಲ್ಕೆರೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಒಂದು ಸಾವಿರಕ್ಕೂ ಹೆಚ್ಚು ವಿದೇಶಿಗರು ನೆಲೆಸಿದ್ದ ಬಾಡಿಗೆ ಮನೆಗಳನ್ನು ಪತ್ತೆಹಚ್ಚಿ ಅವರ ದಾಖಲೆಗಳನ್ನು ಪರಿಶೀಲಿಸಿದರು. ಈ ಪೈಕಿ 11 ವಿದೇಶಿ ಪ್ರಜೆಗಳು ಸರಿಯಾದ ದಾಖಲೆಗಳಿಲ್ಲದೇ, ವೀಸಾ ಅವಧಿ ಮುಗಿದಿದ್ದರೂ ನೆಲೆಸಿರುವುದು ಕಂಡು ಬಂದಿದೆ. 
ನೈಜೀರಿಯಾ ಹಾಗೂ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿದೆ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ವಿಭಾಗಗಳಲ್ಲಿಯೂ ನೆಲೆಸಿರುವ ವಿದೇಶಿ ಪ್ರಜೆಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 
ಈ ಹಿಂದೆಯೂ ಸಹ ಬಾಂಗ್ಲಾ ದೇಶದಿಂದ ಅಕ್ರಮವಾಗಿ ನಗರಕ್ಕೆ ಬಂದು ನೆಲೆಸಿರುವವರ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ವಿವಿಧ ವೀಸಾಗಳಲ್ಲಿ ಭಾರತಕ್ಕೆ ಬಂದು ನಗರದಲ್ಲಿ ನೆಲೆಸಿರುವ ವಿದೇಶಿಗರ ಬಗ್ಗೆಯೂ ಪೊಲೀಸರು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. 
ಮಾಹಿತಿ ನೀಡಲು ಮನವಿ:
ತಮ ಮನೆಗಳಲ್ಲಿ ಬಾಡಿಗೆಗೆ ಇರುವ ವಿದೇಶೀಯರ ಬಗ್ಗೆ ಯಾವುದೇ ಅನುಮಾನ ವಿದ್ದಲ್ಲಿ ಮಾಲೀಕರು ಕೂಡಲೇ ಸ್ಥಳೀಯ ಪೊಲೀಸ್‌‍ ಠಾಣೆಗೆ ಮಾಹಿತಿ ನೀಡುವಂತೆ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಮನವಿ ಮಾಡಿದ್ದಾರೆ.
ನಗರದ ಎಲ್ಲಾ ಪ್ರದೇಶಗಳಲ್ಲಿ ವಾಸವಿರುವ ವಿದೇಶಿ ಪ್ರಜೆಗಳ ವೀಸಾ, ಫಾರಂ-ಸಿ ಮತ್ತು ಇತರೆ ದಾಖಲಾತಿಗಳ ಪರಿಶೀಲನೆಯನ್ನು ಸಿಸಿಬಿ ಒಳಗೊಂಡಂತೆ ಎಲ್ಲಾ ವಿಭಾಗದ ಉಪ ಪೊಲೀಸ್‌‍ ಆಯುಕ್ತರು ನಡೆಸುತ್ತಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.