2026-06-08 01:20:27

possibilities of rain in some districts; meteriological department| ಮುಂದಿನ ಐದು ದಿನಗಳಲ್ಲಿ ಕಾಲ ಹಲವು ಜಿಲ್ಲೆಗಳಲ್ಲಿ ಮಳೆ ಸಂಭವ| Speed News Kannada

possibilities of rain in some districts; meteriological department| ಮುಂದಿನ ಐದು ದಿನಗಳಲ್ಲಿ ಕಾಲ ಹಲವು ಜಿಲ್ಲೆಗಳಲ್ಲಿ ಮಳೆ ಸಂಭವ| Speed News Kannada

ಬೆಂಗಳೂರು: ಮುಂದಿನ ಐದು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾದ್ಯತೆಗಳಿವೆ. ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿನ ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು, ಇದು ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಜೊತೆಗೆ ಆಗ್ನೇಯ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪಗಳ ಬಳಿ ಕೇರಳ ಕರಾವಳಿಯ ಮೇಲೆ ಸುಳಿಗಾಳಿ ಬೀಸಲಿದೆ. ಈ ಬದಲಾವಣೆಗಳಿಂದಾಗಿ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತಗಳಿವೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 11 ರಿಂದ ಮೇ 15 ರವರೆಗೆ ರಾಜ್ಯದಾದ್ಯಂತ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದೆ. ವಿಶೇಷವಾಗಿ ಮೇ 15 ಮತ್ತು 16 ರಂದು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ  ಮುನ್ಸೂಚನೆ ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಸಂಜೆ ಅಥವಾ ರಾತ್ರಿಯ ವೇಳೆ ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share:


Tags:

rain karnataka

Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.