2026-06-08 05:25:40

Post-election violence in West Bengal Four dead | ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ನಾಲ್ವರ ಸಾವು | Speed News Kannada

Post-election violence in West Bengal Four dead | ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ನಾಲ್ವರ ಸಾವು | Speed News Kannada

ಕೊಲ್ಕತ್ತಾ, ಮೇ.6- ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಂತರ ನಡೆದ ಹಿಂಸಾಚಾರ ಮತ್ತು ಧ್ವಂಸಕೃತ್ಯಗಳಲ್ಲಿ ಭಾಗಿಯಾಗಿರುವವರನ್ನು ತಕ್ಷಣವೇ ಬಂಧಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರ ಘಟನೆಗಳಲ್ಲಿ ನಾಲ್ವರ ಸಾವನ್ನಪ್ಪಿದ್ದು, ಹಲವು ಪಕ್ಷಗಳ ಕಚೇರಿಗಳು ಧ್ವಂಸಗೊಂಡ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ನಿರ್ದೇಶನ ನೀಡಿದೆ.
ಮುಖ್ಯ ಚುನಾವಣಾ ಆಯುಕ್ತರು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ, ಕೊಲ್ಕತ್ತಾ ಪೊಲೀಸ್ ಆಯುಕ್ತರು ಹಾಗೂ ಕೇಂದ್ರ ಸಶಸ್ತ್ರ ಪಡೆಗಳ ಮಹಾನಿರ್ದೇಶಕರಿಗೆ ಸೇರಿದಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಮತ್ತು ಸಂಬಂಧಿತ ಅಧಿಕಾರಿಗಳಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ಗಸ್ತು ನಡೆಸುವಂತೆ ಸೂಚಿಸಿದ್ದಾರೆ.
ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರು ಹಾಗೂ ಧ್ವಂಸಕೃತ್ಯಗಳಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಬೇಕುಎಂದು ಸಿಇಸಿ ಸೂಚನೆ ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ. ಕಾನೂನನ್ನು ತ್ವರಿತವಾಗಿ ಹಾಗೂ ದೃಢವಾಗಿ ಜಾರಿಗೊಳಿಸುವ ಅಗತ್ಯವನ್ನೂ ಮುಖ್ಯ ಚುನಾವಣಾ ಆಯುಕ್ತರು ಒತ್ತಿ ಹೇಳಿದ್ದಾರೆ.
ರಾಜ್ಯದ ಕೆಲವು ಭಾಗಗಳಲ್ಲಿ ಕಾನೂನು-ಸುವ್ಯವಸ್ಥೆ ಬಗ್ಗೆ ಆತಂಕಗಳ ನಡುವೆ ಈ ನಿರ್ದೇಶನ ನೀಡಲಾಗಿದ್ದು, ಪರಿಸ್ಥಿತಿಯನ್ನು ಚುನಾವಣಾ ಆಯೋಗ ಸಮೀಪದಿಂದಲೇ ಗಮನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.ಶಾಂತಿಗೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಕಟ್ಟುನಿಟ್ಟಾಗಿ ಎದುರಿಸಲು ನಾವು ಹೈ ಅಲರ್ಟ್‌ನಲ್ಲಿರಲು ಸೂಚಿಸಲಾಗಿದೆಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಗಳಾದ್ಯಂತ ಭದ್ರತೆ ಹೆಚ್ಚಿಸಲಾಗಿದ್ದು, ಪೊಲೀಸ್ ಹಾಗೂ ಕೇಂದ್ರ ಪಡೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಹಿತಕರ ಘಟನೆಗಳನ್ನು ತಡೆಯಲು ಕ್ರಮ ಕೈಗೊಂಡಿವೆ ಎಂದು ಅವರು ತಿಳಿಸಿದ್ದಾರೆ. ಕೊಲ್ಕತ್ತಾ ಮೇ.6- ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಂತರ ನಡೆದ ಹಿಂಸಾಚಾರ ಮತ್ತು ಧ್ವಂಸಕೃತ್ಯಗಳಲ್ಲಿ ಭಾಗಿಯಾಗಿರುವವರನ್ನು ತಕ್ಷಣವೇ ಬಂಧಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ .

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.