2026-07-23 07:35:46

Prasannananda Puri Swamiji | ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ ಆಸ್ಪತ್ರೆಗೆ ದಾಖಲು | Speed News Kannada

Prasannananda Puri Swamiji | ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ ಆಸ್ಪತ್ರೆಗೆ ದಾಖಲು | Speed News Kannada

ರಾಯಚೂರು: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭಕ್ತರು ತಿಳಿಸಿದ್ದಾರೆ. 
ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ಕಳೆದ ರಾತ್ರಿ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಉಳಿದುಕೊಂಡಿದ್ದದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.
ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ರಾಯಚೂರಿನಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.  ಶ್ರೀಗಳು ಹೈದರಾಬಾದ್‌ ನಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.