2026-03-07 03:36:27

pre budget meeting with departments ಬಜೆಟ್‌ ಪೂರ್ವ ತಯಾರಿ ಸಭೆ: ಲೋಕೋಪಯೋಗಿ, ಸಕ್ಕರೆ, ಕೃಷಿ ಇಲಾಖೆಗಳ ಸಚಿವರ ಜತೆ ಚರ್ಚೆ Speed News Kannada

pre budget meeting with departments ಬಜೆಟ್‌ ಪೂರ್ವ ತಯಾರಿ ಸಭೆ: ಲೋಕೋಪಯೋಗಿ, ಸಕ್ಕರೆ, ಕೃಷಿ ಇಲಾಖೆಗಳ ಸಚಿವರ ಜತೆ ಚರ್ಚೆ Speed News Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕೋಪಯೋಗಿ ಇಲಾಖೆ, ಜವಳಿ, ಕಬ್ಬು ಅಭಿವೃದ್ಧಿ & ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಇಲಾಖೆ ಮತ್ತು ಕೃಷಿ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ 2026-27ನೇ ಸಾಲಿನ ಆಯವ್ಯಯ ಪೂರ್ವ‌ಭಾವಿ ಸಭೆ ನಡೆಸಿ, ಇಲಾಖೆಯ ಅನುದಾನದ ಬೇಡಿಕೆ ಸ್ವೀಕರಿಸಿ, ನೂತನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು. 
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜವಳಿ, ಕಬ್ಬು ಅಭಿವೃದ್ಧಿ & ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರೂ ಆದ ಬಿ.ಆರ್.ಪಾಟೀಲ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.| ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ವಿಷಯ ಹಂಚಿಕೊಂಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯು ಮುಂದಿನ ಆರ್ಥಿಕ ವರ್ಷದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಪ್ರಮುಖ ಅಭಿವೃದ್ಧಿ ಯೋಜನೆಗಳು, ಹೊಸ ರಸ್ತೆ ಸಂಪರ್ಕಗಳ ನಿರ್ಮಾಣ, ಗ್ರಾಮೀಣ ಪ್ರದೇಶಗಳ ಸಂಚಾರ ವ್ಯವಸ್ಥೆ ಬಲಪಡಿಸುವ ಕಾರ್ಯಕ್ರಮಗಳು ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಸ್ಥಿತಿಗತಿ ಕುರಿತು ಮಾಹಿತಿ ನೀಡಲಾಯಿತು.
ಇದೇ ವೇಳೆ, ಇಲಾಖೆಯ ವಿವಿಧ ಅಗತ್ಯ ಬೇಡಿಕೆಗಳು ಮತ್ತು ಮುಂದಿನ ಕಾರ್ಯಯೋಜನೆಗಳನ್ನು ಮಾನ್ಯ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದ್ದು, ಜನೋಪಯೋಗಿ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.