2026-04-23 07:40:54

Pre-wedding photoshoot in temple wearing slippers and shoes | ಚಪ್ಪಲಿ, ಶೂ ಧರಿಸಿ ದೇಗುಲದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್‌: ಸ್ಥಳೀಯರ ತೀವ್ರ ವಿರೋಧ, ಹಲ್ಲೆ | Speed news kannada

Pre-wedding photoshoot in temple wearing slippers and shoes | ಚಪ್ಪಲಿ, ಶೂ ಧರಿಸಿ ದೇಗುಲದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್‌: ಸ್ಥಳೀಯರ ತೀವ್ರ ವಿರೋಧ, ಹಲ್ಲೆ | Speed news kannada

ದೇವಸ್ಥಾನದ ಬಳಿ ಪ್ರೀ ವೆಡ್ಡಿಂಗ್ ಶೂಟಿಂಗ್ ನಡೆಸುತ್ತಿದ್ದ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಬೆಟ್ಟದ ಬೈರವೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ದೇವಾಲಯದ ಆವರಣದಲ್ಲಿ ನಿಯಮ ಉಲ್ಲಂಘಿಸಿ ಚಪ್ಪಲಿ, ಶೂಧರಿಸಿ ಫೋಟೋಶೂಟ್ ಮಾಡಿದ್ದೇ ಸ್ಥಳೀಯರ ಆಕ್ರೋಶಕ್ಕೆ ಕಾರಣ ಎಂದು ಹೇಳಲಾಗಿದೆ.

ಸಾರ್ವಜನಿಕ ದೇವಸ್ಥಾನದ ಆವರಣದಲ್ಲಿ ಫೋಟೋ ತೆಗೆಯಲು ವಿಶೇಷ ಅನುಮತಿಯ ಅಗತ್ಯವಿಲ್ಲ ಎಂದು ಫೋಟೋಗ್ರಾಫರ್‌ಗಳು ಸಮರ್ಥಿಸಿಕೊಂಡಿದ್ದಾರೆ. ಈ ವೇಳೆ ಆರಂಭವಾದ ಮಾತಿನ ಚಕಮಕಿ ನೋಡನೋಡುತ್ತಿದ್ದಂತೆಯೇ ವಿಕೋಪಕ್ಕೆ ತಿರುಗಿದೆ. ಸ್ಥಳೀಯರು ಎಂದು ಹೇಳಿಕೊಂಡ ಗುಂಪು ಫೋಟೋಗ್ರಾಫರ್‌ಗಳ ಮೇಲೆ ಏಕಾಏಕಿ ಹಲ್ಲೆ ನಡೆಸಲು ಮುಂದಾಗಿದೆ. 'ಯಾಕಪ್ಪ ಹೊಡಿತಾ ಇದ್ದೀರಿ? ನಮ್ಮ ತಪ್ಪೇನಿದೆ?' ಎಂದು ಫೋಟೋಗ್ರಾಫರ್‌ಗಳು ಅಸಹಾಯಕತೆಯಿಂದ ಪ್ರಶ್ನಿಸಿದರೂ ಕೇಳದ ಉದ್ರಿಕ್ತ ಗುಂಪು, ಗೂಂಡಾಗಿರಿ ಪ್ರದರ್ಶಿಸಿ ಅವರ ಮೇಲೆ ಹಿಗ್ಗಾಮುಗ್ಗಾ ಕೈ ಮಾಡಿದೆ ಎನ್ನಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.