2026-03-07 07:30:30

Premananda Swamiji | ಪ್ರೇಮಾನಂದ ಸ್ವಾಮೀಜಿ ಪ್ರವಚನ ಸಾಮಾನ್ಯರ ಸಾಲಿನಲ್ಲಿ ವಿರಾಟ್ ಕೊಹ್ಲಿ ಅನುಷ್ಕಾ | Speed News Kannada

Premananda Swamiji | ಪ್ರೇಮಾನಂದ ಸ್ವಾಮೀಜಿ ಪ್ರವಚನ ಸಾಮಾನ್ಯರ ಸಾಲಿನಲ್ಲಿ ವಿರಾಟ್ ಕೊಹ್ಲಿ ಅನುಷ್ಕಾ | Speed News Kannada

ಮಥುರಾ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಗೆ ವೃಂದಾವನದ ಧರ್ಮಗುರು ಪ್ರೇಮಾನಂದ ಗೋವಿಂದ ಶರಣ ಜೀ ಮಹಾರಾಜ್ ಅವರನ್ನು ಭೇಟಿಯಾಗಿದ್ದಾರೆ. ಸಾಮಾನ್ಯರಂತೆ ಭಕ್ತರೊಂದಿಗೆ ಕುಳಿತುಕೊಂಡು ಪ್ರೇಮಾನಂದ ಸ್ವಾಮೀಜಿ ಅವರ ಪ್ರವಚನವನ್ನು ಆಲಿಸಿದ್ದಾರೆ.
ವಿರಾಟ್ ಕೊಹ್ಲಿ ದಂಪತಿ ಭಕ್ತಿಯಿಂದ ಕುಳಿತ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.'ಕಠಿಣ ಸಮಯಗಳು ನಿಜವಾದ ಭಕ್ತರನ್ನು ಪರೀಕ್ಷೆಗೆ ಒಡ್ಡುತ್ತವೆ. ಜನರು ನಾಟಕೀಯವಾಗಿ ಭಕ್ತಿಯನ್ನು ವ್ಯಕ್ತಪಡಿಸುತ್ತಾರೆ. ಇದರಿಂದ ದೇವರು ಒಲಿಯುವುದಿಲ್ಲ. ದೇವರನ್ನು ಪ್ರೀತಿಯಿಂದ ಆರಾಧಿಸಬೇಕು' ಎಂದು ಪ್ರೇಮಾನಂದ ಸ್ವಾಮೀಜಿ ಬೋಧಿಸಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಬೆಳಿಗ್ಗೆ ಆಶ್ರಮಕ್ಕೆ ಭೇಟಿ ನೀಡಿದ್ದ ಕೊಹ್ಲಿ ದಂಪತಿ ಹಲವು ಸಮಯ ಅಲ್ಲಿಯೇ ಕಳೆದಿದ್ದಾರೆ. ಈ ಹಿಂದೆ ಟೆಸ್ಟ್ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಬಳಿಕ 2025ರ ಮೇ 13ರಂದು ಕೊಹ್ಲಿ ದಂಪತಿ ಸ್ವಾಮಿಜಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಅದಕ್ಕೂ ಮೊದಲು ಹಲವು ಸಲ ವಿರಾಟ್ ದಂಪತಿ ಸ್ವಾಮೀಜಿಯನ್ನು ಭೇಟಿಯಾಗಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.