2026-03-07 07:31:49

Presentation of The Budget For The Year 2026-27 | 2026-27ನೇ ಸಾಲಿನ ಬಜೆಟ್ ಮಂಡನೆ.. ಯಾರಿಗೆಲ್ಲಾ ಬಂಪರ್..! | Speed News Kannada

Presentation of The Budget For The Year 2026-27 | 2026-27ನೇ ಸಾಲಿನ ಬಜೆಟ್ ಮಂಡನೆ.. ಯಾರಿಗೆಲ್ಲಾ ಬಂಪರ್..! | Speed News Kannada

ದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 9 ನೇ ಬಾರಿಗೆ ಬಜೆಟ್ ಅನ್ನ ಮಂಡಿಸಿದ್ದಾರೆ. ಹಾಗಾದ್ರೆ ಈ ಒಂದು ಬಜೆಟ್‌ ಅಲ್ಲಿ ಯಾರಿಗೆಲ್ಲ ಬಂಪರ್‌ ಆಫರ್‌ ಸಿಗ್ತು ಅಂತ ನೋಡ್ತಾ ಹೋಗೋನ.. ಮೊದಲಿಗೆ ದೇಶದ ರೈತರಿಗೆ ಉಡುಗೊರೆಯನ್ನು ಘೋಷಿಸಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಿಶೇಷ ಗಮನ ನೀಡಬೇಕು ಎಂದು ಹೇಳಿದ್ದಾರೆ. ಉತ್ಪಾದಕತೆಯನ್ನು ಹೆಚ್ಚಿಸಲು ಹಣಕಾಸು ಸಚಿವರು ತೆಂಗಿನಕಾಯಿ ಉತ್ಪಾದನಾ ಯೋಜನೆಯನ್ನು ಘೋಷಿಸಿದರು. 1 ಕೋಟಿ ರೈತರು ತಮ್ಮ ಜೀವನೋಪಾಯಕ್ಕಾಗಿ ತೆಂಗಿನಕಾಯಿಯನ್ನು ಅವಲಂಬಿಸಿದ್ದಾರೆ ಕಚ್ಚಾ ಗೋಡಂಬಿ ಮತ್ತು ತೆಂಗಿನಕಾಯಿ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ವಿಶೇಷ ಕಾರ್ಯಕ್ರಮವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. 2030 ರ ವೇಳೆಗೆ ಭಾರತೀಯ ಗೋಡಂಬಿ ಮತ್ತು ಕೋಕೋವನ್ನು ಜಾಗತಿಕ ಪ್ರೀಮಿಯಂ ಬ್ರ್ಯಾಂಡ್‌ಗಳಾಗಿ ಪರಿವರ್ತಿಸುವುದು ಗುರಿಯಾಗಿದೆ ಅಂತ ತಮ್ಮ ಬಜೆಟ್‌ ಮಂಡನೆಯಲ್ಲಿ ವ್ಯಕ್ತ ಪಡಿಸಿದರು. 

ಶ್ರೀಗಂಧವು ಭಾರತದ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಂಪರೆಯಲ್ಲಿ ಆಳವಾಗಿ ಬೇರೂರಿರುವಂತದ್ದು ಹೀಗಾಗಿ ಭಾರತೀಯ ಶ್ರೀಗಂಧದ ಮರದ ಪ್ರತಿಷ್ಠೆಯನ್ನು ಪುನಃಸ್ಥಾಪಿಸಲು ಅದರ ಕೃಷಿ ಮತ್ತು ಸಂಸ್ಕರಣೆಯನ್ನು ಉತ್ತೇಜಿಸಲು ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ಕೆಲಸ ಮಾಡುತ್ತದೆ ಅಂತ ಹೇಳಿದರು. ಹಳೆಯ ಮತ್ತು ಕಡಿಮೆ ಇಳುವರಿ ನೀಡುವ ತೋಟಗಳನ್ನು ಪುನರುಜ್ಜೀವನಗೊಳಿಸಲು ಮತ್ತು ವಾಲ್ನಟ್, ಬಾದಾಮಿ ಮತ್ತು ಪೈನ್ ಬೀಜಗಳ ಸುಧಾರಿತ ಕೃಷಿಯನ್ನು ಉತ್ತೇಜಿಸಲು ವಿಶೇಷ ಕಾರ್ಯಕ್ರಮವನ್ನು ಘೋಷಿಸಿದರು. ಇದು ರೈತರ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಯುವಕರನ್ನು ತೊಡಗಿಸಿಕೊಳ್ಳುವ ಮೂಲಕ ಈ ಉತ್ಪನ್ನಗಳ ಮೌಲ್ಯವನ್ನು ಹೆಚ್ಚಿಸುತ್ತದೆ. ಇಲ್ಲಿ ಎಲ್ಲಾ ವರ್ಗದವರಿಗಾಗಿ ಬಜೆಟ್ ತಯಾರಿಸಲಾಗಿದೆ. ಕುಟುಂಬಳಿಗೆ ಹೆಚ್ಚಿನ ಹಣ ಸಿಗುವಂತೆ ವಿಕಸತಿ ಭಾರತದ ಗುರಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಬಡತನ ನಿರ್ಮೂಲನೆ ಮಾಡುವ ಕಾರ್ಯ ಮಾಡಿದ್ದೇವೆ. ಶೇ.7 ರಷ್ಟು ಅಭಿವೃದ್ಧಿ ಹೊಂದಿದ್ದೇವೆ. ಮೋದಿ ಅವರು ವಿಕಸಿತ ಭಾರತಕ್ಕೆ ಕರೆ ಕೊಟ್ಟಿದ್ದಾರೆ. 

ಭಾರತ ಜಗತ್ತಿನ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ ಅಂತ ಇಲ್ಲಿ ಹೇಳಿದರು. ಅಷ್ಟೇ ಅಲ್ಲ ಖನಿಜ ಸಮೃದ್ಧವಾಗಿರುವ ರಾಜ್ಯಗಳಿಗೆ ಕಾರಿಡಾರ್ ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರದ ಔಷಧ ಸಾಮಾರ್ಥ್ಯವನ್ನು ಹೆಚ್ಚಿಸಲಾಗುವುದು, ಮೋದಿ ಅವರು ವಿಕಸಿತ ಭಾರತಕ್ಕೆ ಕರೆಕೊಟ್ಟಿದ್ದು, 2047ರ ಗುರಿಯನ್ನು ಮೋದಿ ಇಟ್ಟುಕೊಂಡಿದ್ದಾರೆ. ಸೆಮಿಕಂಡಕ್ಟರ್ ಮಿಷನ್ ಗೆ 40 ಸಾವಿರ ಕೋಟಿ ರೂ. ಘೋಷಣೆ ಮಾಡಲಾಗುವುದು. ತಮಿಳುನಾಡು, ಆಂಧ್ರ, ಓಡಿಶಾ, ಕೇರಳಕ್ಕೆ ಬಂಪರ್ ಲಾಟ್ರಿ ಅಂತ ಹೇಳಿದರೆ ತಪ್ಪಾಗಲ್ಲ ಮಹಾತ್ಮಾ ಗಾಂಧಿ ಗ್ರಾಮ್ ಸ್ವರಾಜ್ಯ ಆರಂಭಿಸಲಾಗುವುದು. ಒನ್ ಪ್ರೊಡಕ್ಟ್ ಒನ್ ಸ್ಟೇಟ್ ಯೋಜನೆ ಆರಂಭಿಸಲಾಗುವುದು, ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲು. ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ, ಹಣಕಾಸು ಹಂಚಿಕೆಗೆ ಕ್ರೆಡಿಟ್ ಗ್ಯಾರಂಟಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ. ಮಧ್ಯಮ ಮತ್ತು ಸಣ್ಣ ಉದ್ಯಮಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸಾಲದ ನೆರವು ಘೋಷಿಸಲಾಗಿದೆ. ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರೀಯ ಔಷಧಿ ನಿಯಂತ್ರಣವನ್ನು ಜಾರಿಗೆ ತರುತ್ತಿದ್ದೇವೆ. ಭಾರತದ ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಬಯೋಫಾರ್ಮ್ ಶಕ್ತಿ ಯೋಜನೆ ಘೋಷಿಸಲಾಗಿದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.