2026-06-08 01:28:19

prim minister modi visit bengaluru on may10th|ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ: ಇಲ್ಲಿದೆ ವಿವರ| Speed News Kannada

prim minister modi visit bengaluru on may10th|ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ: ಇಲ್ಲಿದೆ ವಿವರ| Speed News Kannada

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ಅವರು ಆರ್ಟ್ ಆಫ್ ಲಿವಿಂಗ್ ನ 45ನೇ ವಾರ್ಷಿಕೋತ್ಸವ ಮತ್ತು ಸ್ಥಾಪಕ ಶ್ರೀ ರವಿಶಂಕರ್ ಅವರ 70ನೇ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇದರ ಅಂಗವಾಗಿ ನೂತನವಾಗಿ ಸ್ಥಾಪಿಸಲಾಗಿರುವ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ.

ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿಂವಿಂಗ್ ಫೌಂಡೇಷನ್ ಕಳೆದ 45 ವರ್ಷಗಳಿಂದ ಯೋಗ, ಧ್ಯಾನ ಹಾಗೂ ಆಧ್ಯಾತ್ಮಿಕ ಶಿಕ್ಷಣದ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪರಿಸರ ಪುನರುಜ್ಜೀವನ, ಶಿಕ್ಷಣ ಅಭಿವೃದ್ಧಿ ಮತ್ತು ವಿಪತ್ತು ನಿರ್ವಹಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. 150ಕ್ಕೂ ಹೆಚ್ಚು ದೇಶಗಳಲ್ಲಿ ತನ್ನ ಚಟುವಟಿಕೆಗಳನ್ನು ವಿಸ್ತರಿಸಿರುವ ಈ ಸಂಸ್ಥೆ ಹಲವು ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.