2026-03-07 06:20:49

Prime Minister Modi has 100 million followers | 100 ಮಿಲಿಯನ್ ಫಾಲೋಯರ್ಸ್‌ ಹೊಂದಿದ ಪ್ರಧಾನಿ ಮೋದಿ ಜಾಗತಿಕ ದಾಖಲೆ ನಿರ್ಮಾಣ | Speed News Kannada

Prime Minister Modi has 100 million followers | 100 ಮಿಲಿಯನ್ ಫಾಲೋಯರ್ಸ್‌ ಹೊಂದಿದ ಪ್ರಧಾನಿ ಮೋದಿ ಜಾಗತಿಕ ದಾಖಲೆ ನಿರ್ಮಾಣ | Speed News Kannada

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇನ್‌ ಸ್ಟಾಗ್ರಾಂನಲ್ಲಿ 100 ಮಿಲಿಯನ್ ಅನುಯಾಯಿಗಳನ್ನು ಹೊಂದಿದ ವಿಶ್ವದ ಮೊದಲ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಅವರು ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಎರಡು ಪಟ್ಟು ಹೆಚ್ಚು ಅನುಯಾಯಿಗಳನ್ನು ಹೊಂದಿರುವುದು ಮತ್ತೊಂದು ವಿಶೇಷ.
 ಪ್ರಧಾನಿ ಮೋದಿ ಅವರು, 2014ರಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೇರಿದ್ದರು. 
ಡೊನಾಲ್ಡ್ ಟ್ರಂಪ್ 43.2 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದರೆ ಇಂಡೋನೇಷ್ಯಾ ಅಧ್ಯಕ್ಷ ಪ್ರೊಬೊವೊ ಸುಬಿಯಂಟೊ ಅವರಿಗೆ 15 ಮಿಲಿಯನ್ ಅನುಯಾಯಿಗಳಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲುಲಾ 14.4 ಮಿಲಿಯನ್, ಟರ್ಕಿ ಅಧ್ಯಕ್ಷ  ರೆಸೆಪ್ ತಯ್ಯಿಪ್ ಎರ್ಡೋಗನ್ ಅವರಿಗೆ 11.6 ಮಿಲಿಯನ್ ಮತ್ತು ಅರ್ಜೆಂಟಿನಾ ಅಧ್ಯಕ್ಷ ಜೇವಿಯರ್ ಮಿಲೀ ಅವರಿಗೆ 6.4 ಮಿಲಿಯನ್ ಅನುಯಾಯಿಗಳಿದ್ದಾರೆ.
ಭಾರತದಲ್ಲಿಯೂ ಇನ್‌ಸ್ಟಾಗ್ರಾಂನಲ್ಲಿ ಮೋದಿಯವರು ಇತರ ರಾಜಕೀಯ ನಾಯಕರಿಗಿಂತ ಬಹಳ ಮುಂದಿದ್ದಾರೆ. ಎರಡನೇ ಸ್ಥಾನದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದಾರೆ. ಅವರು 16.1 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದರೆ ತರ ರಾಹುಲ್ ಗಾಂಧಿಯವರು 12.6 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.