2026-04-23 07:44:16

Private bus catches fire | ಧಗಧಗನೆ ಹೊತ್ತು ಉರಿದ ಖಾಸಗಿ ಬಸ್‌, ಚಾಲಕನ ಸಮಯ ಪ್ರಜ್ಞೆಯಿಂದ ಬದುಕುಳಿದ ಪ್ರಯಾಣಿಕರು | Speed news kannada

Private bus catches fire | ಧಗಧಗನೆ ಹೊತ್ತು ಉರಿದ ಖಾಸಗಿ ಬಸ್‌, ಚಾಲಕನ ಸಮಯ ಪ್ರಜ್ಞೆಯಿಂದ ಬದುಕುಳಿದ ಪ್ರಯಾಣಿಕರು | Speed news kannada

ಶುಕ್ರವಾರ (ಏ.17) ರಾತ್ರಿ ಹೈದರಾಬಾದ್‌ನ ಕೆಪಿಎಚ್‌ಬಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸಿಬ್ಬಂದಿಯ ಜಾಗರೂಕತೆಯಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶ್ರೀ ದುರ್ಗಾ ಮಹೇಶ್ವರಿ ಟ್ರಾವೆಲ್ಸ್‌ಗೆ ಸೇರಿದ ಎಸಿ ಸ್ಲೀಪರ್ ಬಸ್ ಮಿಯಾಪುರದಿಂದ ಹೊರಟು ಆಂಧ್ರಪ್ರದೇಶದ ಪಾಲಕೊಲ್ಲು ಮಾರ್ಗವಾಗಿ ಎಸ್‌ಆರ್ ನಗರ ಕಡೆಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ಕ್ಯಾಬಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದು, ದೊಡ್ಡ ದುರಂತವೊಂದು ತಪ್ಪಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.