ಬೆಂಗಳೂರಿನ : ಬೆಳ್ಳಂಬೆಳಗ್ಗೆ ಹೆಬ್ಬಾಳ ಬಳಿ ಇರುವ ಭದ್ರಪ್ಪ ಲೇಔಟ್ ರಿಂಗ್ ರಸ್ತೆಯಲ್ಲಿ ಖಾಸಗಿ ಕಂಪನಿ ಬಸ್ ಒಂದು ಪಲ್ಟಿಯಾಗಿ ಭಯಾನಕ ಅಪಘಾತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಉದ್ಯೋಗಿಗಳನ್ನು ಕಂಪನಿಗೆ ಕರೆದೊಯ್ಯುತ್ತಿದ್ದ ಖಾಸಗಿ ಕಂಪನಿ ಬಸ್ ಪಲ್ಟಿಯಾಗಿದ.
ಜಾಲಹಳ್ಳಿಯಿಂದ ದೇವನಹಳ್ಳಿ ಕಡೆಗೆ ಹೋಗುತ್ತಿದ್ದ ಕಂಪನಿ ಬಸ್‌ನಲ್ಲಿ ಉದ್ಯೋಗಿಗಳು ಪ್ರಯಾಣಿಸುತ್ತಿದ್ದರು. ಬೆಳಗ್ಗೆ ಸುಮಾರು 5 ಗಂಟೆ ಈ ಘಟನೆ ನಡೆದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕೆಲವು ಉದ್ಯೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದಿಂದ ಅದೃಷ್ಟವಶಾತ್ ಯಾರಿಗೂ ಪ್ರಾಣಹಾನಿ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೂ ಕಂಪನಿ ಬಸ್ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಚರ್ಚೆ ಎದ್ದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದರಿಂದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಬಸ್‌ನಲ್ಲಿದ್ದ ಉದ್ಯೋಗಿಗಳಲ್ಲಿ ಕೆಲವರಿಗೆ ತಲೆಗೆ ಏಟು ಬಿದ್ದು, ಕೈ-ಕಾಲುಗಳಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಾರಿಗೂ ಗಂಭೀರ ಗಾಯವಾಗಿಲ್ಲ ಎಂಬುದು ಸಮಾಧಾನದ ಸಂಗತಿ. ಆದರೆ ಅಪಘಾತದ ಆಘಾತದಿಂದ ಉದ್ಯೋಗಿಗಳು ಮಾನಸಿಕವಾಗಿ ಆತಂಕಕ್ಕೊಳಗಾಗಿದ್ದಾರೆ.