2026-04-23 04:56:45

Private plane crashes after hitting tree | ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ವಿಮಾನ ಪತನ | Speed news kannada

Private plane crashes after hitting tree | ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ವಿಮಾನ ಪತನ | Speed news kannada

ಖಾಸಗಿ ವಿಮಾನವೊಂದು ಮರಕ್ಕೆ ಡಿಕ್ಕಿ ಹೊಡೆದು ನಾಶವಾಗಿರುವ ಘಟನೆ ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅಪಘಾತದ ವೇಳೆ ವಿಮಾನ ನೆಲದಿಂದ ಕೇವಲ 30 ಅಡಿ ಎತ್ತರದಲ್ಲಿ ಹಾರುತ್ತಿದ್ದರಿಂದ ಈ ರೀತಿ ಆಗಿದೆ ಎಂದು ವರದಿಯಾಗಿದೆ. ನಾರಾಯಣಪುರ ಪೊಲೀಸ್ ಠಾಣೆ ಪ್ರದೇಶದ ಖುರಾಸಗಢ ಗ್ರಾಮದ ಬಳಿಯ ರತನ್‌ಪಹ್ಲಿ ಅರಣ್ಯದಲ್ಲಿ ಈ ಅವಘಡ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ನೆಲದಿಂದ ಸುಮಾರು 30 ಅಡಿ ಎತ್ತರದಲ್ಲಿ ಹಾರುತ್ತ, ಮರಕ್ಕೆ ಡಿಕ್ಕಿಯಾಗಿದೆ. ವಿಮಾನ ಪತನಗೊಂಡ  ವಿಡಿಯೋ ಸೆರಯಾಗಿದ್ದು, ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಪಘಾತಕ್ಕೂ ಕೆಲವೇ ಕ್ಷಣಗಳ ಮುನ್ನ ಭಾರೀ ಕೆಳಮಟ್ಟದಲ್ಲಿ ಸಣ್ಣ ಸಿಂಗಲ್-ಎಂಜಿನ್ ಪ್ರೊಪೆಲ್ಲರ್ ವಿಮಾನ ಕೆಳಕ್ಕೆ ಹಾರುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ಘಟನೆ ಕುರಿತು ಪರಿಶೀಲನೆ ನಡೆಸುತ್ತಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.