2026-03-07 02:42:37

Priyank Kharge hits back at the slanderer | ದಲಿತತ್ವ ಎಂದರೆ ಚಡ್ಡಿ ಹೊರುವುದಲ್ಲ ಸ್ವಾಭಿಮಾನ ಛಲವಾದಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು | Speed News Kannada

Priyank Kharge hits back at the slanderer | ದಲಿತತ್ವ ಎಂದರೆ ಚಡ್ಡಿ ಹೊರುವುದಲ್ಲ ಸ್ವಾಭಿಮಾನ ಛಲವಾದಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು | Speed News Kannada

ಬೆಂಗಳೂರು: ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಶಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ ದಿನವಾಗುತ್ತದೆ! ಎಂದು ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಛಲವಾದಿ ಅವರನ್ನು ತರಾಟೆಗೆ ತೆಗದುಕೊಂಡಿದ್ದಾರೆ. 
RSS ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಬದಲು ನನ್ನ ತಂದೆಯವರ ಸೈದ್ದಂತಿಕ ನೆರಳಿನಲ್ಲಿ ಮುಂದುವರೆಯುವುದು ಅತ್ಯಂತ ಗೌರವಯುತ ರಾಜಕಾರಣ ಎಂದು ಭಾವಿಸಿದ್ದೇನೆ.
ವಂಶಪರಂಪರೆಯ ರಾಜಕಾರಣದ ಬಗ್ಗೆ ಮಾತನಾಡಲೇಬೇಕು ಎಂದಿದ್ದರೆ ತಮ್ಮದೇ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ್ ಬೆಲ್ಲದ್ ಅವರಿಂದ ಮಾತನಾಡಲು ಶುರು ಮಾಡಲಿ, ಆ ಧೈರ್ಯ ನಾರಾಯಣಸ್ವಾಮಿಯವರಿಗಿದೆಯೇ?
ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ,
ದಲಿತತ್ವ ಎಂದರೆ ಸ್ವಾಭಿಮಾನ; ದಲಿತತ್ವ ಎಂದರೆ ಅನ್ಯಾಯಕ್ಕೆ ಪ್ರತಿರೋಧ; ದಲಿತತ್ವ ಎಂದರೆ ಆತ್ಮಬಲ.
ದಲಿತತ್ವದ ಸ್ವಾಭಿಮಾನವನ್ನು ಆರ್‌ ಎಸ್‌ ಎಸ್ ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು! ಎಂದು ಪ್ರಶ್ನಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಾಂಕ್‌ ಖರ್ಗೆ ಅವರಿಗೆ ದಲಿತತ್ವವೇ ಇಲ್ಲ ಎಂದು ಟೀಕಿಸಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.