ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ , ಸಂಸತ್ತಿನಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಲೋಕಸಭೆ ಕಲಾಪಕ್ಕೆ ಪ್ರಧಾನಿ ನರೇಂದ್ರ ಮೋದಿ ಗೈರು ಹಾಜರಾಗಿರುವ ಬಗ್ಗೆ ಪ್ರಿಯಾಂಕಾ ಗಾಂಧಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿರೋಧ ಪಕ್ಷಗಳು ಎತ್ತಿರುವ ವಿಷಯಗಳಿಗೆ ಸರಿಯಾಗಿ ಉತ್ತರ ಕೊಡದೇ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ರಾಹುಲ್ ಗಾಂಧಿಯನ್ನು ʼಮುಗ್ಧʼ ಎಂದು ಕರೆದಿರುವುದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕಾ, ವಿರೋಧ ಪಕ್ಷದ ನಾಯಕರಿಗೆ ಸಂಸತ್ತಿನಲ್ಲಿ ಮುಕ್ತವಾಗಿ ಮಾತನಾಡಲು ಅವಕಾಶ ನೀಡಬೇಕು ಎಂದು ಹೇಳಿದರು. ಯಾರ ಬಗ್ಗೆಯಾದರೂ ಮಾತನಾಡಲು ಇದು ಒಂದು ಮಾರ್ಗವೇ? ಈ ರೀತಿ ಪದ ಬಳಕೆ ಸರಿಯೇ? ಎಂದು ಪ್ರಶ್ನಿಸಿದ್ದಾರೆ. ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು. ಮಾತನಾಡುವುದಕ್ಕೆ ಅವಕಾಶ ನೀಡದೇ, ಸುಮ್ಮಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.
ರಾಹುಲ್ ಗಾಂಧಿ ಎಪ್ಸ್ಟೀನ್ ಫೈಲ್‌ಗಳಿಂದ ಪ್ರಸಾರವಾಗುತ್ತಿರುವ ಪ್ರಧಾನಿ ಮೋದಿ ಮತ್ತು ಅವರ ಇಸ್ರೇಲ್ ಅಧಿಕೃತ ಭೇಟಿಯ ಉಲ್ಲೇಖಗಳನ್ನು ಉಲ್ಲೇಖಿಸಿದ್ದಾರೆ. ಸರ್ಕಾರವು ಈ ಹೇಳಿಕೆಗಳನ್ನು ಆಧಾರರಹಿತ ಮತ್ತು ತಿರಸ್ಕಾರಾರ್ಹ ಎಂದು ತಳ್ಳಿಹಾಕಿದೆ.
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿ ಭಾಷಣವನ್ನು ಪೂರ್ಣಗೊಳಿಸದಂತೆ ತಡೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತು. ಲೋಕಸಭೆಯಲ್ಲಿ ಪ್ರತಿಭಟನೆಗಳು ಮುಂದುವರಿದ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಲಾಯಿತು.