2026-06-08 01:20:21

ಬೆಂಗಳೂರಿನಲ್ಲಿ ಇಂದು ಮಳೆ ಸಾಧ್ಯತೆ; ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ|Speed News Kannada

ಬೆಂಗಳೂರಿನಲ್ಲಿ ಇಂದು ಮಳೆ ಸಾಧ್ಯತೆ; ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ|Speed News Kannada

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ. ಆದ್ರ್ರತೆಯ ಮಟ್ಟವು ಶೇ 45 ರಿಂದ 70ರಷ್ಟು ಇರುತ್ತದೆ ಎಂದೂ ತಿಳಿಸಿದೆ.

ದಕ್ಷಿಣ ಕನ್ನಡಕ್ಕೆ ಇಂದು ಆರೆಂಜ್ ಅಲರ್ಟ್ ಗೋಷಿಸಲಾಗಿದೆ. ಉಳಿದ ಎಲ್ಲಾ ಕಡೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮೈಸೂರು, ಕೋಲಾರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಅತಿ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಲ್ಲ ಭಾರಿ ಮಳೆಯಾಗಲಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 2-3 ದಿನಗಳಲ್ಲಿ ಮಧ್ಯ ಅರಬ್ಬೀ ಸಮುದ್ರದ ಕೆಲವು ಭಾಗಗಳು, ಸಂಪೂರ್ಣ ಗೋವಾ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳು, ಕರ್ನಾಟಕದ ಇನ್ನೂ ಹಲವು ಭಾಗಗಳು, ತಮಿಳುನಾಡಿನ ಉಳಿದ ಭಾಗಗಳು, ಬಂಗಾಳಕೊಲ್ಲಿಯ ನೈಋತ್ಯ, ಪಶ್ಚಿಮಮಧ್ಯ ಮತ್ತು ಈಶಾನ್ಯ ಬಂಗಾಳಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ರಾಜ್ಯದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ವ್ಯಾಪಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.