2026-03-07 06:20:13

Protest at AI meeting | ಎಐ ಸಭೆಯಲ್ಲಿ ಪ್ರತಿಭಟನೆ ಯುವ ಕಾಂಗ್ರೆಸ್‌ ಅಧ್ಯಕ್ಷ ಬಂಧನ ಕಾಂಗ್ರೆಸ್‌ ಆಕ್ರೋಶ | Speed News Kannada

Protest at AI meeting | ಎಐ ಸಭೆಯಲ್ಲಿ ಪ್ರತಿಭಟನೆ ಯುವ ಕಾಂಗ್ರೆಸ್‌ ಅಧ್ಯಕ್ಷ ಬಂಧನ ಕಾಂಗ್ರೆಸ್‌ ಆಕ್ರೋಶ | Speed News Kannada

ನವದೆಹಲಿ: ಎ.ಐ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್‌ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ದೆಹಲಿಯಲ್ಲಿ ಎ.ಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಕಾಂಗ್ರೆಸ್‌ ಯುವ ಘಟಕದ ಸದಸ್ಯರು ಅಂಗಿ ತೆಗೆದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಚಿಬ್‌ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ಯುವ ಕಾಂಗ್ರೆಸ್‌ ಕಾರ್ಯಕರ್ತರು ಎಐ ಶೃಂಗಸಭೆಯ ‘ಎಕ್ಸ್‌ಪೋ’ ನಡೆದಿದ್ದ ಜಾಗದಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ. ಚಿಬ್ ಬಂಧನದ ಹಿನ್ನೆಲೆ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿದ್ದು ಬಂದೊಬಸ್ತ್ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್‌ ಆಕ್ರೋಶ:
ಚಿಬ್‌ ಬಂಧಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಪ್ರಶ್ನೆಗಳಿಗೆ ಮೋದಿ ಹೆದರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವುದು ವಿರೋಧ ಪಕ್ಷಗಳ ಕರ್ತವ್ಯ. ಆದರೆ ಸರ್ವಾಧಿಕಾರಿಗೆ ಇದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಎಷ್ಟೇ ದೌರ್ಜನ್ಯ ನಡೆಸಿದರೂ, ಜನರ ಸಮಸ್ಯೆಗಳಿಗೆ ಧ್ವನಿಯಾಗುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.