2026-03-07 01:50:14

Protesting Against The Metro Fare | ಮೆಟ್ರೋ ದರಯೇರಿಕೆ ವಿರೋಧಿಸಿ ಪ್ರತಿಭಟನೆ ಸಂಸದ ತೇಜಸ್ವಿ ಶಾಸಕ ರಾಮಮೂರ್ತಿ ಪೊಲೀಸ್ ವಶಕ್ಕೆ! | Speed News Kannada

Protesting Against The Metro Fare | ಮೆಟ್ರೋ ದರಯೇರಿಕೆ ವಿರೋಧಿಸಿ ಪ್ರತಿಭಟನೆ ಸಂಸದ ತೇಜಸ್ವಿ ಶಾಸಕ ರಾಮಮೂರ್ತಿ ಪೊಲೀಸ್ ವಶಕ್ಕೆ! | Speed News Kannada

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಯೇರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಹಲವು ಬಿಜೆಪಿ ಕಾರ್ಯಕರ್ತರೊಡನೆಈ ವೇಳೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ತೇಜಸ್ವಿ ಸೂರ್ಯ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಗೂಂಡಾಗಳಿಗೂ ನಾನು ಹೆದರಿಲ್ಲ. ನನ್ನದೇ ಏರಿಯಾ ಜಯನಗರದಲ್ಲಿ ನಾನು ಹೆದರುತ್ತೇನೆ ಎಂದು ಯಾರು ಭಾವಿಸಬಾರದು" ಎಂದು ಕಿಡಿಕಾರಿದರು.
ಸರ್ಕಾರದ ಆರ್ಥಿಕ ಸ್ಥಿತಿಯನ್ನು ತೋರಿಸಲು ಖಾಲಿ ಟ್ರಂಕ್ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದು ಹೇಳಿದರು. ರಾಜ್ಯ ಸರ್ಕಾರದ ಬಳಿ ಹಣ ಇಲ್ಲದೆ, ಪ್ರಯಾಣಿಕರಿಂದಲೇ ಹಣ ಸಂಗ್ರಹಿಸಲು ಮೆಟ್ರೋಗೆ ಸೂಚಿಸಲಾಗಿದೆ ಎಂದು ಆರೋಪಿಸಿದರು. ಬಿಎಮ್‌ಆರ್‌ಸಿಎಲ್‌ಗೆ ಸರ್ಕಾರದಿಂದ ಶ್ಯಾಡೋ ಕ್ಯಾಶ್ ನೀಡಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸರ್ಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದರು.ಮೆಟ್ರೋ ದರಯೇರಿಕೆ ಬಗ್ಗೆ ಕೇಂದ್ರ ಹಾಗೂ ರಾಜ್ಯದ ಹಸ್ತಕ್ಷೇಪವನ್ನು ಕುರಿತು ಎರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿದೆ. ಇಬ್ಬರನ್ನೂ ವಶಕ್ಕೆ ಪಡೆಯಲಾಯಿತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.