2026-06-25 02:04:47

PSI Loka caught accepting bribe | ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಲೋಕಾ ಬಲೆಗೆ | Speed news kannada

PSI Loka caught accepting bribe | ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಲೋಕಾ ಬಲೆಗೆ | Speed news kannada

ಬಾದಾಮಿ ತಾಲೂಕಿನ ಕೆರೂರಿನಲ್ಲಿ ಪಿಎಸ್‌ಐ ಹಾಗೂ ಪೇದೆ ಇಬ್ಬರು ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂಬುವರು ಸಿಕ್ಕಿಬಿದ್ದಿದ್ದು, ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್‌ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಲಂಚದ ಬೇಡಿಕೆ ಬಗ್ಗೆ ಮುತ್ತಪ್ಪ ನಾಯ್ಕರ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಫೋನ್‌ ಕರೆ ರೆಕಾರ್ಡಿಂಗ್ ಆಧಾರದ ಮೇಲೆ ದಾಳಿ ಮಾಡಿ ಇಬ್ಬರನ್ನು ಲೋಕಾಯುಕ್ತ ಬಂಧಿಸಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಲೋಕಾಯುಕ್ತ ಎಸ್.ಪಿ ಮಹಾಲಿಂಗ್ ನಂದಗಾಂವಿ ಮಾರ್ಗದರ್ಶನದಲ್ಲಿ, ಲೋಕಾ ಡಿವೈಎಎಸ್‌ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿ ಪಿಎಸ್‌ಐ ಹಾಗೂ ಪೇದೆಯನ್ನು ಬಂಧಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.