2026-06-25 02:36:59

PU student drowns after going for a swim in the river|ನದಿಗೆ ಈಜಲು ಹೋಗಿ ಪಿಯು ವಿದ್ಯಾರ್ಥಿ ಜಲಸಮಾಧಿ|Speed News Kannada

PU student drowns after going for a swim in the river|ನದಿಗೆ ಈಜಲು ಹೋಗಿ ಪಿಯು ವಿದ್ಯಾರ್ಥಿ ಜಲಸಮಾಧಿ|Speed News Kannada

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಂದನೂರು ಗ್ರಾಮದಲ್ಲಿ ದುಃಖಕರ ಘಟನೆ ಸಂಭವಿಸಿದೆ. ಭೀಮಾ ನದಿಯಲ್ಲಿ ಈಜಲು ಹೋಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಲಾಲ್ ಸಾಬ್ ಪಟೇಲ್ ದುರ್ಮರಣಕ್ಕೀಡಾಗಿದ್ದಾನೆ.ಗೆಳೆಯರೊಂದಿಗೆ ನದಿಗೆ ಇಳಿದಿದ್ದ ಲಾಲ್ ಸಾಬ್, ಈಜುವ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ನೇಹಿತರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದರೂ, ಅವನನ್ನು ಬದುಕಿಸಲು ಸಾಧ್ಯವಾಗಲಿಲ್ಲ.

ಘಟನೆಯ ಮಾಹಿತಿ ತಿಳಿದ ಜೇವರ್ಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ನದಿಯಲ್ಲಿ ಈಜುವಾಗ ಎಚ್ಚರಿಕೆ ಅಗತ್ಯ ಎಂಬ ಸಂದೇಶವನ್ನು ಮತ್ತೊಮ್ಮೆ ನೆನಪಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.