ಬೆಂಗಳೂರು: 2026ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ವೇಳಾಪಟ್ಟಿ ಮತ್ತಿತರ ವಿವರಗಳನ್ನು ಪ್ರಕಟಿಸಿದರು.
2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 1,217 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಅದೇ ರೀತಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 2,871 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ.
ಉಚಿತ ಬಸ್ ಪ್ರಯಾಣ:
ಗ್ರಾಮೀಣ ಹಾಗೂ ದೂರದ ಊರುಗಳಿಂದ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ, ಪರೀಕ್ಷಾ ದಿನಗಳಂದು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು ಎಂದೂ ಸಚಿವರು ತಿಳಿಸಿದರು.
ಪಾರದರ್ಶಕ ಪರೀಕ್ಷೆ:
ಈ ಬಾರಿ ಎರಡೂ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಪರೀಕ್ಷಾ ಸಿದ್ಧತೆಗಳನ್ನು ಕುರಿತು ಪೊಲೀಸ್ ಮತ್ತು ಗುಪ್ತಚರ ಇಲಾಖೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು), ಬಿಇಒ ಮತ್ತು ಡಿಡಿಪಿಐ ಅವರ ಜತೆಯೂ ಚರ್ಚೆ ನಡೆಸಲಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಅಚ್ಚುಕಟ್ಟಾದ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ, ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಹಾಗೂ ಪರೀಕ್ಷಾ ಮಂಡಳಿಯ ನಿರ್ದೇಶಕ ಗೋಪಾಲಕೃಷ್ಣ ಉಪಸ್ಥಿತರಿದ್ದರು.
ವೇಳಾಪಟ್ಟಿ ಹೀಗಿದೆ:
ದ್ವಿತೀಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ (ಫೆಬ್ರವರಿ 28 ರಿಂದ ಮಾರ್ಚ್ 17): ಫೆಬ್ರವರಿ 28: ಕನ್ನಡ, ಅರೇಬಿಕ್ ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ಇತಿಹಾಸ ಮಾರ್ಚ್ 6: ಭೌತಶಾಸ್ತ್ರ ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ ಮಾರ್ಚ್ 10: ಅರ್ಥಶಾಸ್ತ್ರ ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ ಮಾರ್ಚ್ 12: ಹಿಂದಿ ಮಾರ್ಚ್ 13: ರಾಜ್ಯಶಾಸ್ತ್ರ ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ವೇಳಾಪಟ್ಟಿ (ಮಾರ್ಚ್ 18 ರಿಂದ ಏಪ್ರಿಲ್ 2): ಮಾರ್ಚ್ 18: ಪ್ರಥಮ ಭಾಷೆ ಮಾರ್ಚ್ 23: ವಿಜ್ಞಾನ ಮಾರ್ಚ್ 25: ದ್ವಿತೀಯ ಭಾಷೆ ಮಾರ್ಚ್ 28: ಗಣಿತ ಮಾರ್ಚ್ 30: ತೃತೀಯ ಭಾಷೆ ಏಪ್ರಿಲ್ 2: ಸಮಾಜ ವಿಜ್ಞಾನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ವೇಳಾಪಟ್ಟಿ (ಮೇ 18 ರಿಂದ ಮೇ 23): ಮೇ 18: ಪ್ರಥಮ ಭಾಷೆ ಮೇ 19: ವಿಜ್ಞಾನ ಮೇ 20: ದ್ವಿತೀಯ ಭಾಷೆ ಮೇ 21: ಗಣಿತ ಮೇ 22: ತೃತೀಯ ಭಾಷೆ ಮೇ 23: ಸಮಾಜ ವಿಜ್ಞಾನ