2026-06-08 01:28:32

question pqper leak; neet-ug exam cancelled, re exam soon | ಪ್ರಶ್ನೆಪತ್ರಿಕೆ ಸೋರಿಕೆ,NEET-UG ಪರೀಕ್ಷೆ ರದ್ದು; ಮರುಪರೀಕ್ಷೆಗೆ ಶೀಘ್ರ ದಿನಾಂಕ ಘೋಷಣೆ| Speed News Kannada

question pqper leak; neet-ug exam cancelled, re exam soon | ಪ್ರಶ್ನೆಪತ್ರಿಕೆ ಸೋರಿಕೆ,NEET-UG  ಪರೀಕ್ಷೆ ರದ್ದು; ಮರುಪರೀಕ್ಷೆಗೆ ಶೀಘ್ರ ದಿನಾಂಕ ಘೋಷಣೆ| Speed News Kannada

ನವದೆಹಲಿ: ಮೇ 3 ರಂದು ನಡೆದ NEET-UG 2026 ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಿದೆ. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ರಾಜಸ್ಥಾನ ಸೇರಿದಂತೆ ಕೆಲವು ಕಡೆ ಸೋರಿಕೆಯಾದ ಆರೋಪ ಕೇಳಿ ಬಂದಿತ್ತು. ಈ ನಿಟ್ಟಿನಲ್ಲಿ ಮರುಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.

NTA ಶೀಘ್ರದಲ್ಲೇ ಮರುಪರೀಕ್ಷೆಯ ಹೊಸ ದಿನಾಂಕವನ್ನು ಘೋಷಿಸಲಿದೆ. ಮರುಪರೀಕ್ಷೆಗೆ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ ಕಾಯ್ದುಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದೀಗ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಬೇಕಾಗಿದೆ.

 

 

Share:


Tags:

neet re exam

Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.