ನವದೆಹಲಿ: ಮೇ 3 ರಂದು ನಡೆದ NEET-UG 2026 ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಿದೆ. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ರಾಜಸ್ಥಾನ ಸೇರಿದಂತೆ ಕೆಲವು ಕಡೆ ಸೋರಿಕೆಯಾದ ಆರೋಪ ಕೇಳಿ ಬಂದಿತ್ತು. ಈ ನಿಟ್ಟಿನಲ್ಲಿ ಮರುಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.
NTA ಶೀಘ್ರದಲ್ಲೇ ಮರುಪರೀಕ್ಷೆಯ ಹೊಸ ದಿನಾಂಕವನ್ನು ಘೋಷಿಸಲಿದೆ. ಮರುಪರೀಕ್ಷೆಗೆ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ ಕಾಯ್ದುಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದೀಗ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಬೇಕಾಗಿದೆ.