2026-03-07 06:21:47

R Ashok | ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಎಮರ್ಜೆನ್ಸಿ ಇನ್ ಕರ್ನಾಟಕ ಆರ್‌ ಅಶೋಕ್‌ ವಾಗ್ದಾಳಿ | Speed News Kannada

R Ashok | ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಎಮರ್ಜೆನ್ಸಿ ಇನ್ ಕರ್ನಾಟಕ ಆರ್‌ ಅಶೋಕ್‌ ವಾಗ್ದಾಳಿ | Speed News Kannada

ಬೆಂಗಳೂರು: ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಆದೇಶವನ್ನು ಹಿಂಪಡೆಯುವಂತೆ ಪ್ರತಿಪಕ್ಷ ನಾಯಕ ಆರ್.‌ ಆಶೋಕ್‌ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಎಮರ್ಜೆನ್ಸಿ ಇನ್ ಕರ್ನಾಟಕ ! ತನ್ನ ವೈಫಲ್ಯಗಳನ್ನ, ಯಡವಟ್ಟುಗಳು, ಭ್ರಷ್ಟಾಚಾರವನ್ನು ಮುಚ್ಚಿಟ್ಟುಕೊಳ್ಳುವ ಸಲುವಾಗಿ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಹೊರಟಿರುವ  ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಧೋರಣೆಯನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ಟೀಕಿಸಿದ್ದಾರೆ.
 ಸಿಎಂ  ಅವರೇ, ತಮ್ಮ ಸರ್ವೋಚ್ಛ ನಾಯಕ ರಾಹುಲ್‌ ಗಾಂಧಿ ಅವರು ಹೋದ ಬಂದಲ್ಲೆಲ್ಲ ಪ್ರದೇಶನ ಮಾಡುವ ಕೆಂಪು ಸಂವಿಧಾನದ ಪುಸ್ತಕದಲ್ಲಿ ಮಾಧ್ಯಮಗಳಿಗೆ ಪತ್ರಿಕಾ ಸ್ವಾತಂತ್ರ್ಯ ಇಲ್ಲವೇ? ಅಥವಾ ಇತ್ತೀಚೆಗೆ ಮಾಧ್ಯಮಗಳು ಬಯಲು ಮಾಡಿದ ತಮ್ಮ ಅತ್ಯಾಪ್ತ ಸಚಿವ  ಭೈರತಿ ಸುರೇಶ್‌  ಅವರ ಕಚೇರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಚಿನ್ನ, ನಗದು ಕಳ್ಳತನದಂತಹ ಪ್ರಕರಣಗಳು, ಅಕ್ರಮ ವ್ಯವಹಾರಗಳು ಇನ್ನಷ್ಟು ಬಯಲಾಗುತ್ತವೆ ಎನ್ನುವ ಭಯವೋ? ಎಂದು ಪ್ರಶ್ನಿಸಿದ್ದಾರೆ.
 ವಿಧಾನಸೌಧ ನಿಮ್ಮ ಕಾಂಗ್ರೆಸ್ ಪಕ್ಷದ ಕಚೇರಿ ಅಲ್ಲ ಸ್ವಾಮಿ, ಅದು ಪ್ರಜಾಸೌಧ, ಏಳು ಕೋಟಿ ಕನ್ನಡಿಗರಿಗೆ ಸೇರಿದ ಶಕ್ತಿಸೌಧ. ಅಲ್ಲಿಗೆ ಮಾಧ್ಯಮದವರನ್ನು ಬರಬೇಡಿ ಎಂದು ನಿಯಂತ್ರಣ ಮಾಡಲು ಯಾರಿಗೂ ಅಧಿಕಾರವಿಲ್ಲ. ಮಾಧ್ಯಮದವರು ವಿಧಾನಸೌಧದ ನಿಗದಿತ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡಬೇಕು ಎನ್ನುವ ಈ ಅಸಂವಿಧಾನಿಕ ಆದೇಶವನ್ನ ಈ ಕೂಡಲೇ ವಾಪಸ್ಸು ಪಡೆಯಬೇಕು ಮತ್ತು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮಗಳು ಸ್ವತಂತ್ರವಾಗಿ ತಮ್ಮ ಕರ್ತವ್ಯ ನಿರ್ವಹಣೆ ಮಾಡಲು ಮುಕ್ತ ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.