2026-06-08 06:45:25

Racial abuse in Australia | ಆಸ್ಟ್ರೇಲಿಯಾದಲ್ಲಿ ಜನಾಂಗೀಯ ನಿಂದನೆ: ಭಾರತ ಮೂಲದ ನರ್ಸ್ ಮೇಲೆ ಹಲ್ಲೆ | Speed News Kannada

Racial abuse in Australia | ಆಸ್ಟ್ರೇಲಿಯಾದಲ್ಲಿ ಜನಾಂಗೀಯ ನಿಂದನೆ: ಭಾರತ ಮೂಲದ ನರ್ಸ್ ಮೇಲೆ ಹಲ್ಲೆ | Speed News Kannada

ಹೊಸದಿಗಂತ ಡಿಜಿಟಲ್ ಡೆಸ್ಕ್: 
ಆಸ್ಟ್ರೇಲಿಯಾದ ಜೀಲಾಂಗ್‌ನಲ್ಲಿ ಭಾರತೀಯ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಮೇಲೆ ದಾಳಿ ನಡೆದಿದೆ.
ಜೀಲಾಂಗ್ ಎಂಬ ನಗರದ ಸಮೀಪವಿರುವ ಕೊರಿಯೊ ಎಂಬಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಹೊರಬರುವಾಗ ಈ ಘಟನೆ ಸಂಭವಿಸಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮೂವರು ವ್ಯಕ್ತಿಗಳ ಗುಂಪು ಹರ್ಮನ್ ಅವರ ಮೇಲೆ ಹಲ್ಲೆ ನಡೆಸಿದ್ದು, ಹರ್ಮನ್ ಅವರನ್ನು "ಇಂಡಿಯನ್ ಡಾಗ್" (ಭಾರತೀಯ ನಾಯಿ) ಎಂದು ಜನಾಂಗೀಯವಾಗಿ ನಿಂದಿಸಿದ್ದಾರೆ.
ಹರ್ಮನ್ ಅವರ ಮುಖಕ್ಕೆ ತಲೆಗೆ ಜೋರಾಗಿ ಗುದ್ದಿದ್ದು, ಇದ್ರ ಪರಿಣಾಮ ಮೂಗಿನಿಂದ ರಕ್ತಸ್ರಾವವಾಗಿದೆ. ಹೀಗಾಗಿ ಹರ್ಮನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.