2026-06-08 01:28:18

ಸಿದ್ದರಾಮಯ್ಯ ಮುಂದುವರೆಸಲು ರಾಹುಲ್‌ ಇಂಗಿತ: ಕೆಲವೇ ಕ್ಷಣಗಳಲ್ಲಿ ಅಂತಿಮ ನಿರ್ಧಾರ ಪ್ರಕಟ | Speed News Kannada

ಸಿದ್ದರಾಮಯ್ಯ ಮುಂದುವರೆಸಲು ರಾಹುಲ್‌ ಇಂಗಿತ: ಕೆಲವೇ ಕ್ಷಣಗಳಲ್ಲಿ ಅಂತಿಮ ನಿರ್ಧಾರ ಪ್ರಕಟ | Speed News Kannada

ನವದೆಹಲಿ: ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆಯೇ ಇಲ್ಲವೇ ಎನ್ನುವುದು ಅಂತಿಮವಾಗಲಿದೆ. ಒಂದು ವೇಳೆ ಬದಲಾವಣೆಯಾದರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಅಧಿಕಾರ ಹಸ್ತಾಂತರವಾಗಲಿದೆಯೇ ಅಥವಾ ದಿಢೀರ್‌ ಬೆಳವಣಿಗೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮುಖ್ಯಮಂತ್ರಿ ಆಗಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಆದರೆ ಸಿದ್ದರಾಮಯ್ಯ ಅವರನ್ನೇ ಮುಂದುವರಸಲು ರಾಹುಲ್‌ ಗಾಂಧಿ ಬಯಸಿದ್ದಾರೆ ಎಂಬ ಮಾಹಿತಿ ಇದೆ.

ಈಗಾಗಲೇ ಸಿದ್ದರಾಮಯ್ಯ ಮತ್ತು ಅವರ ಆಪ್ತರು ಕಾಂಗ್ರೆಸ್‌ ಮುಖ್ಯ ಕಚೇರಿ ಇಂದಿರಾಭವನಕ್ಕೆ ಆಗಮಿಸಿದ್ದಾರೆ.

ಇಂದು ಬೆಳಗ್ಗೆ ಕರ್ನಾಟಕ ಭವನದಲ್ಲಿ ಅವರ ಆಪ್ತರಾದ ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದಿದ್ದಾರೆ.

ಹೈಕಮಾಂಡ್‌ ಮುಂದಿರುವ ಆಯ್ಕೆಗಳು:

ಸಿದ್ದರಾಮಯ್ಯ ಅವರನ್ನೇ ಮುಂದುವರೆಯಲು ಸೂಚಿಸಿ ಸಚಿವ ಸಂಪುಟ ವಿಸ್ತರಿಸಬಹುದು. ಡಿಕೆ ಶಿವಕುಮಾರ್‌ ಅವರನ್ನು ಸಮಾಧಾನಪಡಿಸಲು ಅವರಿಗೆ ವಿಸ್ತರಣೆಯಲ್ಲಿ ಹೆಚ್ಚಿನ ಅವಕಾಶ ನೀಡಬಹುದು. ಸಿದ್ದರಾಮಯ್ಯ ಸೂಚಿಸಿದಂತೆ ಪರಮೇಶ್ವರ್‌ ಅವರಿಗೆ ಅವಕಾಶ ಸಿಕ್ಕರೂ ಸಿಗಬಹುದು. ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನ ನೀಡಿ ಸಿಎಂ ಹುದ್ದೆ ತೆರವುಗೊಳಿಸಲು ಸೂಚಿಸಬಹುದು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.