2026-05-20 01:10:21

ರಾಜ್ಯದಾದ್ಯಂತ ಒಂದು ವಾರ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ |Speed News Kannada

ರಾಜ್ಯದಾದ್ಯಂತ ಒಂದು ವಾರ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ |Speed News Kannada

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಒಂದು ವಾರ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 20ರಿಂದ 26ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಬೆಳಗಾವಿ, ಗದಗ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮಳೆ ಜೊತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Share:


Tags:

rain karnataka

Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.