2026-07-23 06:16:02

Rajamouli humiliated at CCXP event in Mexico | ಮೆಕ್ಸಿಕೋದ CCXP ಕಾರ್ಯಕ್ರಮದಲ್ಲಿ ರಾಜಮೌಳಿಗೆ ಅವಮಾನ | Speed news kannada

Rajamouli humiliated at CCXP event in Mexico | ಮೆಕ್ಸಿಕೋದ CCXP ಕಾರ್ಯಕ್ರಮದಲ್ಲಿ ರಾಜಮೌಳಿಗೆ ಅವಮಾನ | Speed news kannada

ಖ್ಯಾತ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ಅವರಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವಮಾನವಾಗಿದೆ ಎಂಬ ಆರೋಪ ಕೇಳಿಬಂದಿದೆ.‘ವಾರಣಾಸಿ’ ಚಿತ್ರದ ಬಿಹೈಂಡ್ ದ ಸೀನ್ಸ್ ದೃಶ್ಯಗಳು CCXP Mexico 2026 ಕಾರ್ಯಕ್ರಮದಲ್ಲಿ ಪ್ರದರ್ಶನ ಕಂಡವು. ಈ ವೇಳೆ ವಿಡಿಯೋ ಸಂದೇಶದ ಮೂಲಕ ಮಾತನಾಡುತ್ತಿದ್ದ ರಾಜಮೌಳಿ ಅವರನ್ನು ಗಮನಿಸದೆ, ಕೆಲವರು ಸಭೆಯಿಂದ ಎದ್ದು ಹೋಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.ಈ ಘಟನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದನ್ನು ರಾಜಮೌಳಿಗೆ ಮಾಡಿದ ಅವಮಾನ ಎಂದು ಅಭಿಪ್ರಾಯಪಟ್ಟರೆ, ಇನ್ನೂ ಕೆಲವರು ವರ್ಣಭೇದದ ಆರೋಪವನ್ನೂ ಮಾಡುತ್ತಿದ್ದಾರೆ.‘ಆರ್‌ಆರ್‌ಆರ್’ ಮತ್ತು ‘ಬಾಹುಬಲಿ’ ಚಿತ್ರಗಳ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ರಾಜಮೌಳಿ, ಈಗ ‘ವಾರಣಾಸಿ’ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.