2026-05-21 09:46:58

ರಾಜೀವ್‌ ಗಾಂಧಿ ಹುತಾತ್ಮ ದಿನ ಆಚರಣೆ; ಪ್ರತಿಜ್ಞಾವಿಧಿ ಭೋದಿಸಿದ ಸಿಎಂ ಸಿದ್ದರಾಮಯ್ಯ |Speed News Kannada

ರಾಜೀವ್‌ ಗಾಂಧಿ ಹುತಾತ್ಮ ದಿನ ಆಚರಣೆ; ಪ್ರತಿಜ್ಞಾವಿಧಿ ಭೋದಿಸಿದ ಸಿಎಂ ಸಿದ್ದರಾಮಯ್ಯ |Speed News Kannada

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹುತಾತ್ಮ ದಿನದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ" ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಡಾ|.ಜಿ.ಪರಮೇಶ್ವರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸೇರಿದಂತೆ ಸಚಿವಾಲಯದ ಸಿಬ್ಬಂದಿಗಳು ಹಾಜರಿದ್ದರು. ಸಿಎಂ, ಡಿಸಿಎಂ, ಅನೇಕ ಸಚಿವರು, ಶಾಸಕರು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿಯೂ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಕೊಡುಗೆಗಳನ್ನು ಸ್ಮರಿಸಿಕೊಂಡಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.