ಬೆಂಗಳೂರು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಖಾಡಕ್ಕಿಳಿದಿದ್ದು, ಬಂಡಾಯ ಶಮನಗೊಳಿಸಲು ಕಸರತ್ತು ಆರಂಭಿಸಿದ್ದಾರೆ. ಮತ್ತೊಂದು ಕಡೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಅಖಾಡಕ್ಕಿಳಿದಿದ್ದು, ಬಂಡಾಯ ಶಮನಗೊಳಿಸಲು ‘ಡ್ಯಾಮೇಜ್ ಕಂಟ್ರೋಲ್’ ಕಸರತ್ತು ಆರಂಭಿಸಿದ್ದಾರೆ. ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್ ಅವರು, ರಾಮಲಿಂಗಾರೆಡ್ಡಿ ಅವರು ನನಗೆ ತುಂಬಾ ಆತ್ಮೀಯರು. ಪಕ್ಷ ಮತ್ತು ಸರ್ಕಾರದ ಬೆಳವಣಿಗೆಯಲ್ಲಿ ಅವರ ಪಾತ್ರ ದೊಡ್ಡದು. ಅವರ ಅಸಮಾಧಾನ ಕುರಿತು ನಾನೇ ಖುದ್ದಾಗಿ ಅವರ ಜೊತೆ ಚರ್ಚಿಸಿ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮತ್ತೊಂದು ಕಡೆ ಬಿಜೆಪಿ ಸರ್ಕಾರವನ್ನು ಟೀಕಿಸಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು, ಟ್ವೀಟ್ ನಲ್ಲಿ ಕನ್ನಡಿಗರು ಬಹುಶಃ ಒಂದು ದಿನ ಸೂರ್ಯನೇ ಹುಟ್ಟದ ನೋಡಬಹುದೇನೋ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಇಲ್ಲದ ದಿನವನ್ನ ನೋಡಲು ಸಾಧ್ಯವೇ ಇಲ್ಲ.
ಇನ್ನು ಎರಡು ವರ್ಷ ನಡೆಯಲಿರುವ ನೀಡಿರುವ ಡಿ.ಕೆ. ಶಿವಕುಮಾರ್ ಸರ್ಕಾರದ ಈ ನಿತ್ಯ ಕಚ್ಚಾಟಕ್ಕೆ ತೇಪೆ ಹೆಚ್ಚಲು ರಾಹುಲ್ ಗಾಂಧಿ ಅವರು, ಕೆ.ಸಿ. ವೇಣುಗೋಪಾಲ್ ಅವರು, ರಣದೀಪ್ ಸೂರ್ಜೆವಾಲ ಅವರು ಬೆಂಗಳೂರಿನಲ್ಲೇ ಒಂದು ಮನೆ ಮಾಡಿಕೊಂಡು ಇಲ್ಲೇ ಇದ್ದುಬಿಟ್ಟರೆ ಒಳ್ಳೆಯದು ಎಂದು ವ್ಯಂಗ್ಯವಾಡಿದ್ದಾರೆ.