2026-06-08 04:51:12

ರಾಮಲಿಂಗಾರೆಡ್ಡಿ ರಾಜೀನಾಮೆ:ಒಳಜಗಳದ ಮುನ್ಸೂಚನೆ; ಬಿಜೆಪಿ ಟೀಕೆ |Speed News Kannada

ರಾಮಲಿಂಗಾರೆಡ್ಡಿ ರಾಜೀನಾಮೆ:ಒಳಜಗಳದ ಮುನ್ಸೂಚನೆ; ಬಿಜೆಪಿ ಟೀಕೆ |Speed News Kannada

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಸರ್ಕಾರ ರಚನೆಯಾದ ಎರಡೇ ದಿನಗಳಲ್ಲಿ ಸಚಿವರೊಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಬಿಜೆಪಿ ಟೀಕಿಸಿದೆ.

ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಅವರು, ಟ್ವೀಟ್‌ ನಲ್ಲಿ  ಕನ್ನಡಿಗರು ಬಹುಶಃ ಒಂದು ದಿನ ಸೂರ್ಯನೇ ಹುಟ್ಟದ ನೋಡಬಹುದೇನೋ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಇಲ್ಲದ ದಿನವನ್ನ ನೋಡಲು ಸಾಧ್ಯವೇ ಇಲ್ಲ.

ಇನ್ನು ಎರಡು ವರ್ಷ ನಡೆಯಲಿರುವ ನೀಡಿರುವ ಡಿ.ಕೆ. ಶಿವಕುಮಾರ್ ಸರ್ಕಾರದ ಈ ನಿತ್ಯ ಕಚ್ಚಾಟಕ್ಕೆ ತೇಪೆ ಹೆಚ್ಚಲು ರಾಹುಲ್ ಗಾಂಧಿ ಅವರು, ಕೆ.ಸಿ. ವೇಣುಗೋಪಾಲ್ ಅವರು, ರಣದೀಪ್ ಸೂರ್ಜೆವಾಲ ಅವರು ಬೆಂಗಳೂರಿನಲ್ಲೇ ಒಂದು ಮನೆ ಮಾಡಿಕೊಂಡು ಇಲ್ಲೇ ಇದ್ದುಬಿಟ್ಟರೆ ಒಳ್ಳೆಯದು ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿಯೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಎಕ್ಸ್‌ ನಲ್ಲಿ ಟ್ವೀಟ್‌ ಮಾಡಿರುವ ಬಿಜೆಪಿ ಪಿಚ್ಚರ್‌ ಅಭಿ ಬಾಕಿ ಹೈ..! ಭ್ರಷ್ಟ ಸರ್ಕಾರದ ಮೊದಲ ವಿಕೆಟ್‌ ಸಂಪುಟ ರಚನೆಯಾಗಿ ಎರಡನೇ ದಿನಕ್ಕೆ ಪತನವಾಗಿದೆ.! ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ರಾಮಲಿಂಗಾರೆಡ್ಡಿ ಅವರು ಇಂಟರ್‌ವೆಲ್‌  ಸಿಎಂ ಶಿವಕುಮಾರ್‌ ಅವರ ಅವಧಿಯಲ್ಲೂ ಕಿತ್ತಾಟ ಮುಂದುವರಿಯಲಿದೆ ಎಂಬ ದೊಡ್ಡ ಸಂದೇಶ ರವಾನಿಸಿದಂತಿದೆ.

ಆಂತರಿಕ ಕಚ್ಚಾಟಗಳಲ್ಲೇ ಮುಳುಗುವ ಮುನ್ಸೂಚನೆ ಈಗಲೇ ಸಿಕ್ಕಿರುವಾಗ ಇನ್ನು ರಾಜ್ಯದ ಹಳಿತಪ್ಪಿರುವ ಆಡಳಿತ ಸರಿದಾರಿಗೆ ಹೋಗಬಹುದು ಎನ್ನುವುದನ್ನು ಈ ನಾಡಿನ ಜನ ನಿರೀಕ್ಷಿಲು ಸಾಧ್ಯವೇ? "ಈ ಪೆಟ್ಟು ಯಾರ ಒಳ ಏಟು" ಎಂದು ತಿಳಿದುಕೊಳ್ಳುವುದರಲ್ಲೇ ಬಂಡೆ ಜೆಲ್ಲಿಪುಡಿಯಾಗುವ ಎಲ್ಲಾ ಮುನ್ಸೂಚನೆ ಸಿಕ್ಕಂತಿದೆ ಎಂದು ವ್ಯಂಗ್ಯವಾಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.