2026-04-23 10:53:23

Ranya Rao released from Parappana Agrahara Jail | ಪರಪ್ಪನ ಅಗ್ರಹಾರ ಜೈಲಿನಿಂದ ರನ್ಯಾ ರಾವ್ ಬಿಡುಗಡೆ | Speed news kannada

Ranya Rao released from Parappana Agrahara Jail | ಪರಪ್ಪನ ಅಗ್ರಹಾರ ಜೈಲಿನಿಂದ ರನ್ಯಾ ರಾವ್ ಬಿಡುಗಡೆ | Speed news kannada

ಗೋಲ್ಡ್ ಸ್ಮಗ್ಲಿಂಗ್​​ ಪ್ರಕರಣದಲ್ಲಿ‌ ಬಂಧನಕೊಳಗಾಗಿದ್ದ ನಟಿ ರನ್ಯಾ ರಾವ್​​​ಗೆ  ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ರನ್ಯಾ ರಾವ್​​ಗೆ ಬಿಗ್​ ರಿಲೀಫ್​ ಸಿಕ್ಕಿದೆ. ಒಂದು ವರ್ಷ ಜೈಲು ವಾಸದ ಬಳಿಕ ಇದೀಗ ಜಾಮೀನು ಸಿಕ್ಕಿದ್ದು, ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆ ಆಗಲಿದ್ದಾರೆ. ಚಿನ್ನ ಕಳ್ಳಸಾಗಣೆ ಮಾಡಿದ್ದ ಆರೋಪದಲ್ಲಿ ರನ್ಯಾ ರಾವ್ ಕಳೆದ 1 ವರ್ಷದಿಂದ ಪರಪ್ಪನ ಅಗ್ರಹಾರದಲ್ಲಿದ್ದರು. ಈ ಹಿಂದೆ ಕೋರ್ಟ್​ನಿಂದ ರನ್ಯಾರಾವ್​ಗೆ ಜಾಮೀನು ಸಿಕ್ಕಿತ್ತು. ಆದರೆ ಕಾಫಿಪೋಸಾ ಹಿನ್ನೆಲೆಯಲ್ಲಿ ಜೈಲಿನಲ್ಲಿದ್ದರು. ಇಂದಿಗೆ ಒಂದು ವರ್ಷ ಆದ ಹಿನ್ನೆಲೆ ಜೈಲಿನಿಂದ ಬಿಡುಗಡೆ ಆಗುತ್ತಿದ್ದಾರೆ. ಇನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್​ ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಮತ್ತು ಕಳ್ಳಸಾಗಣೆ ತಡೆ ಕಾಯ್ದೆ ಅಡಿ ರನ್ಯಾ ರಾವ್ ವಿರುದ್ಧ ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ ಹೊರಡಿಸಿದ್ದ ಬಂಧನ ಆದೇಶವನ್ನು ಎತ್ತಿಹಿಡಿದಿತ್ತು. 102 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಬಂಧಿಯಾಗಿದ್ದ ರನ್ಯಾ ರಾವ್‌ ಇದೀಗ ಬಿಡುಗಡೆಯಾಗಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.