ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ನಿನ್ನೆ (ಫೆಬ್ರುವರಿ 26) ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ತಾರಾ ಜೋಡಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮದುವೆಯಾದ ಬಳಿಕ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದಾರೆ. ಈ ಕುರಿತಾದ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನವ ವಧು-ವರರಾಗಿರುವ ರಶ್ಮಿಕಾ ಮತ್ತು ವಿಜಯ್ ಉದಯಪುರ ವಿಮಾನ ನಿಲ್ದಾಣದಕ್ಕೆ ಆಗಮಿಸಿದ್ದರು. ಅವರನ್ನು ನೋಡಿದ ಕೂಡಲೇ ಪಾಪರಾಜಿಗಳು ನವದಂಪತಿಗಳ ಫೋಟೊ ಕ್ಲಿಕ್ಕಿಸಿಕೊಂಡು, ಶುಭ ಹಾರೈಸಿದ್ದಾರೆ. ಬಳಿಕ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೋಟೊಗಳಿಗೆ ಪೋಸ್ ಕೊಟ್ಟಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ
ಈಗಾಗಲೇ ಈ ಜೋಡಿ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮದುವೆ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಪತಿಯ ಬಗ್ಗೆ ರಶ್ಮಿಕಾ, ಪತ್ನಿಯ ಬಗ್ಗೆ ವಿಜಯ್ ಹಾಡಿ ಹೊಗಳಿದ್ದಾರೆ. ಈ ತಾರಾ ಜೋಡಿಗೆ ಅಭಿಮಾನಿಗಳು, ಸ್ನೇಹಿತರು ಶುಭ ಹಾರೈಸುತ್ತಿದ್ದಾರೆ.