2026-07-23 12:17:48

RCB confirms playoffs if they win 3 matches | 3 ಪಂದ್ಯ ಗೆದ್ದರೆ ಆರ್‌ಸಿಬಿ ಪ್ಲೇಆಫ್‌ ಕನ್ಫರ್ಮ್‌ | Speed news kannada

RCB confirms playoffs if they win 3 matches | 3 ಪಂದ್ಯ ಗೆದ್ದರೆ ಆರ್‌ಸಿಬಿ ಪ್ಲೇಆಫ್‌ ಕನ್ಫರ್ಮ್‌ | Speed news kannada

2026 ನೇ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹಾಲಿ ಚಾಂಪಿಯನ್‌ ತಂಡ ನಿನ್ನೆ ನಡೆದ RCB-GT ಪಂದ್ಯದಲ್ಲಿ ಭರ್ಜರಿ ಜಯವನ್ನು ಸಾಧಿಸಿತು. ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬೆಂಗಳೂರು ತಂಡವು, ಮೊದಲ ಏಳು ಪಂದ್ಯಗಳ ಮೂಲಕ 10 ಅಂಕಗಳನ್ನು ಪಡೆದುಕೊಂಡಿದೆ. ಆರ್‌ಸಿಬಿಯ ತವರು ಅಂಗಳದಲ್ಲಿ ತನ್ನ ಕೊನೆಯ ಪಂದ್ಯದಲ್ಲಿ ಜಯ ಗಳಿಸಿ ಮುನ್ನುಗ್ಗುತ್ತಿದೆ. ಮೊದಲಾರ್ಧದಲ್ಲಿ 5 ಗೆಲುವುಗಳೊಂದಿಗೆ 10 ಅಂಕ ಪಡೆದಿರುವ ಆರ್​ಸಿಬಿ ತಂಡವು ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತ ಪಡಿಸಿಕೊಳ್ಳಲು ಮೂರೇ ಮೂರು ಗೆಲುವು ಸಾಕು. ಅಂದರೆ ದ್ವಿತೀಯಾರ್ಧದ 7 ಮ್ಯಾಚ್​​ಗಳಲ್ಲಿ ಆರ್​ಸಿಬಿ ತಂಡ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಒಟ್ಟು 16 ಅಂಕಗಳನ್ನು ಪಡೆದು ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ. ಹೀಗಾಗಿ ಮುಂದಿನ ಏಳು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರು ಮ್ಯಾಚ್​ಗಳಲ್ಲಿ ಜಯ ಸಾಧಿಸಿ ಪ್ಲೇಆಫ್​ಗೇರುವುದನ್ನು ಎದುರು ನೋಡಬಹುದು. ಈ ಮೂಲಕ ದ್ವಿತೀಯ ಸುತ್ತಿನಲ್ಲೂ ಅಮೋಘ ಪ್ರದರ್ಶನ ನೀಡಿ ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.