2026-03-07 06:52:38

RCB Fans getting Good News from the Government| ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ RCB ಅಭಿಮಾನಿಗಳಿಗೆ ಸರ್ಕಾರದಿಂದ ಸಿಗುತ್ತಾ ಸಿಹಿ ಸುದ್ದಿ | Speed News Kannada

RCB Fans getting Good News from the Government| ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ RCB ಅಭಿಮಾನಿಗಳಿಗೆ ಸರ್ಕಾರದಿಂದ ಸಿಗುತ್ತಾ ಸಿಹಿ ಸುದ್ದಿ | Speed News Kannada

ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೊಚ್ಚಲ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅತಿಯಾದ ಜನಸಂದಣಿ, ಕಳಪೆ ನಿರ್ವಹಣೆ ಮತ್ತು ಭದ್ರತಾ ಲೋಪದಿಂದ ಈ ದುರಂತ ಸಂಭವಿಸಿದ್ದು, ತನಿಖಾ ವರದಿಯಲ್ಲಿ RCB, KSCA ಮತ್ತು DNAಯನ್ನ ದೂಷಿಸಲಾಗಿತ್ತು. ಈ ದುರಂತದ ಬಳಿಕ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳಿಗೆ ನಿರ್ಬಂಧ ಹೇರಲಾಗಿತ್ತು. ದುರ್ಘಟನೆಯ ಬಳಿಕ ಇದುವರೆಗೂ ಯಾವುದೇ ಪಂದ್ಯವನ್ನ ನಡೆಸಿಲ್ಲ. ಆದರೆ ಭದ್ರತಾ ಕ್ರಮಗಳ ಅಳವಡಿಕೆಯ ನಂತರ 2026ರಲ್ಲಿ ಪಂದ್ಯಗಳಿಗೆ ಅನುಮತಿ ನೀಡುವ ಕುರಿತು ಚರ್ಚೆ ನಡೆಯುತ್ತಿದೆ. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನ ಆಯೋಜಿಸಲು ಬಹುತೇಕ ಅನುಮತಿ ದೊರೆತಿದೆ ಎಂದು ಮೂಲಗಳು ತಿಳಿಸಿದ್ದು ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ.
T20 World Cup, ನನ್ನ ಬೌಲಿಂಗ್ ನೋಡಿ ಭಾರತದ ಬ್ಯಾಟರ್‌ಗಳಿಗೆ ಭಯ.. ಸೂರ್ಯಕುಮಾರ್ ಪಡೆಗೆ ಬಿಗ್ ವಾರ್ನಿಂಗ್ ಕೊಟ್ಟ ಪಾಕ್ ಸ್ಪಿನ್ನರ್!
ವಿಧಾನಸೌಧದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅಧಿಕಾರಿಗಳು ಮೈದಾನ ಪರಿಶೀಲನಾ ವರದಿಯನ್ನ ಸಲ್ಲಿಸಿದ್ದು, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಷರತ್ತುಗಳೊಂದಿಗೆ ಸಹಮತ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗಿದೆ. ಹಿಂದಿನ ದುರಂತದ ಹಿನ್ನೆಲೆ ಕ್ರೀಡಾಂಗಣದಲ್ಲಿ ಪಂದ್ಯಗಳನ್ನ ನಡೆಸಲು ಅನುಮತಿ ಇರಲಿಲ್ಲ. ಆದರೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧಿಕಾರಿಗಳು ನ್ಯಾಯಮೂರ್ತಿ ಕುನ್ನ ಅವರ ವರದಿಯ ಶಿಫಾರಸುಗಳನ್ನ ಸಂಪೂರ್ಣವಾಗಿ ಪಾಲಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ.ಕ್ಲಿಯರೆನ್ಸ್ ಸಿಕ್ಕಿಲ್ಲ ಎಂದಿದ್ದ ಪರಮೇಶ್ವರ್!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯಗಳನ್ನ ನಡೆಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದರು. ಇತ್ತೀಚೆಗಷ್ಟೇ ಈ ಕುರಿತು ಪ್ರತಿಕ್ರಿಯಿಸಿದ್ದ ಅವರು, ಜಸ್ಟೀಸ್ ಕುನ್ಯಾರ ವರದಿಯ ಶಿಫಾರಸು ಪಾಲಿಸಬೇಕು ಅಂತಾ ಹೇಳಿದ್ದೀವಿ. ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಸಮಿತಿ ಕೂಡ ರಚಿಸಲಾಗಿತ್ತು. ಸಮಿತಿಯ ಸಹ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಮ್ಯಾಚ್‌ಗಳು ಬರ್ತಿವೆ. ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ. ಬುಧವಾರ ನಾನು ಸಭೆ ಕರೆದಿದ್ದೇನೆ. ಸರ್ಕಾರದ ಹಂತದಲ್ಲಿ ಏನು ಮಾಡಬೇಕೋ, ಅವರಿಗೆ ಏನು ಸೂಚನೆ ಕೊಡಬೇಕೋ ಅಂತಾ ನೋಡ್ತವೆ ಎಂದು ಹೇಳಿದ್ದರು.
T20 World Cup 2026:19 ವರ್ಷಗಳ ಹಳೆಯ ದಾಖಲೆಯನ್ನು ಮುರಿದ ದಾಸುನ್ ಶನಕ..!
ಸಿಎಂ ಸಿದ್ದರಾಮಯ್ಯರ ಜೊತೆಗೂ ಚರ್ಚೆ ಮಾಡಬೇಕಾಗಿದೆ. ನಮ್ಮ ಶಿಫಾರಸನ್ನ ಅವರು ಎಷ್ಟರ ಮಟ್ಟಿಗೆ ಪೂರೈಸಿದ್ದಾರೆ ಅಂತಾ ನೋಡಿ ತೀರ್ಮಾನ ಮಾಡ್ತವೆ. ಬೆಂಗಳೂರಿನಲ್ಲಿ ಮ್ಯಾಚ್ ಆಗಬೇಕು ನಡೆಯಬೇಕೆಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಆದರೆ ಸುರಕ್ಷತೆಯನ್ನೂ ನೋಡಬೇಕು, ಕಾಲ್ತುಳಿತದಂಥ ಘಟನೆಗಳು ಮರುಕಳಿಸಬಾರದಲ್ಲ. ಎಲ್ಲವನ್ನೂ ನೋಡಿಯೇ ಅಂತಿಮ ತೀರ್ಮಾನ ಮಾಡ್ತವೆ ಎಂದು ಪರಮೇಶ್ವರ್ ತಿಳಿಸಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.